ಮೈಸೂರು

ಸಂಪೂರ್ಣ ಸಾಕ್ಷರತೆಗೆ ಅಕ್ಷರಸ್ಥರ ಸಹಕಾರ ಅಗತ್ಯ

Published On :

ಟಿ. ನರಸೀಪುರ: ಕರ್ನಾಟಕವನ್ನು ಸಂಪೂರ್ಣ ಸಾಕ್ಷರತಾ ರಾಜ್ಯವನ್ನಾಗಿಸಲು ಅಕ್ಷರಸ್ಥರ ಸಹಕಾರ ಅಗತ್ಯವೆಂದು ತಾಪಂ ಇಒ ಜೈಕೃಷ್ಣ ಹೇಳಿದರು. ತಾಪಂ ಸಭಾಂಗಣದಲ್ಲಿ ನಡೆದ ಸಾಕ್ಷರ ಭಾರತ್ನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಅನಕ್ಷರಸ್ಥರನ್ನು ಸಾಕ್ಷರತಾ ಮುಖ್ಯವಾಹಿನಿಗೆ ಕರೆತರಬೇಕು. ಮಹಿಳೆ ಹಾಗೂ ಪುರುಷರ ನಡುವಿನ ಸಾಕ್ಷರತಾ ಪ್ರಮಾಣದ ಅಂತರ ಕಡಮೆ ಮಾಡಬೇಕು ಎಂದರು. ಸಾಕ್ಷರತಾ ಭಾರತ್ ಜಿಲ್ಲಾ ಕಾರ್ಯಕ್ರಮ ಸಂಯೋಜಕ ತೇ.ಸಿ. ವಿಶ್ವೇಶ್ವರಯ್ಯ ಮಾತನಾಡಿ, ಜಿಲ್ಲೆಯಲ್ಲಿ ಶೇ.72 ರಷ್ಟು ಸಾಕ್ಷರತಾ ಪ್ರಮಾಣ ಇದೆ. ಸಾಕ್ಷರತಾ ಕಾರ್ಯಕ್ಕೆ ಪ್ರೇರಕರಲ್ಲಿ ಬದ್ಧತೆ ಮುಖ್ಯವಾಗುತ್ತದೆ. ಸಾಮಾಜಿಕ ಕಾಳಜಿಯಿಂದ ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಬೇಲೂರು ಚಂದ್ರಶೇಖರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.