ಹಿಂದೂ ಅಲ್ಪಸಂಖ್ಯಾತರೆಂದು ಪ್ರತ್ಯೇಕಿಸಿ
ಮೈಸೂರು: ಅವಕಾಶಗಳಿಂದ ವಂಚಿತರಾಗಿರುವ ಹಿಂದುಳಿದ ವರ್ಗದವರನ್ನು ಹಿಂದೂ ಅಲ್ಪಸಂಖ್ಯಾತರೆಂದು ನಾಮಕರಣ ಮಾಡಿ ಪ್ರತ್ಯೇಕ ಮೀಸಲಾತಿ ಕಲ್ಪಿಸುವಂತೆ ಅಮೋಘ್ ವಾಹಿನಿ ಮುಖ್ಯಸ್ಥ ಬಿಳಿಗಿರಿ ರಂಗನಾಥ್ ಒತ್ತಾಯಿಸಿದರು. ಹಿಂದುಳಿದ ವರ್ಗಗಳ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಸಮಾರಂಭದಲ್ಲಿ 2014ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇಂದು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗದವರಿಗೆ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಸಿದ್ದರಾಮಯ್ಯ ಈ ವರ್ಗಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಈ ವರ್ಗದಡಿಯಲ್ಲಿ ಬರುವ ಸಣ್ಣ ಸಣ್ಣ ಜಾತಿಗಳು ಬೇರೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ನಿರ್ದೇಶಕ ಶ್ಯಾಮ್ ಸುಂದರ್ ಮಾತನಾಡಿ, ಮೇಲ್ವರ್ಗದವರು ಹಿಂದುಳಿದವರನ್ನು ಉದಾಸೀನತೆಯಿಂದ ಕಾಣುತ್ತಿದ್ದಾರೆ. ಹಾಗಾಗಿ ಹಿಂದುಳಿದ ವರ್ಗಗಳನ್ನು ಸಂಘಟಿಸುವ ಉದ್ದೇಶದಿಂದ ಈ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ. ಇನ್ನು ಮುಂದಾದರು ಹಿಂದುಳಿದ ವರ್ಗದವು ಒಗ್ಗಟ್ಟು ಪ್ರದರ್ಶಿಸಬೇಕು. ಆ ಮೂಲಕ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

