'ಹುಣಸೂರನ್ನು ಮಾದರಿ ಕ್ಷೇತ್ರವಾಗಿ ಮಾಡುವೆ'
ಹುಣಸೂರು: ಹುಣಸೂರು ಕ್ಷೇತ್ರದಲ್ಲಿ ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಕಾರ್ಯನಿರ್ವಹಿಸುವ ಮೂಲಕ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿಸುವುದೆ ತಮ್ಮ ಮುಖ್ಯ ಗುರಿಯಾಗಿದೆಯೆಂದು ಶಾಸಕ ಎಚ್.ಪಿ. ಮಂಜುನಾಥ್ ಹೇಳಿದರು.
ಹುಣಸೂರಿನ ಶ್ರೀ ವಾಸವಾಂಬ ಸಹಕಾರ ಸಂಘದಿಂದ ಆರ್ಯವೈಶ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಸಾಲಿನ ವಿಧಾನಸಭೆಯಲ್ಲಿ ಜನರು ತಮ್ಮನ್ನು ಹೆಚ್ಚಿನ ವಿಶ್ವಾಸ ಇರಿಸಿ ಆರಿಸಿ ಕಳುಹಿಸಿದರು. ಆದರೆ ಬಿಜೆಪಿ ಸರ್ಕಾರ ಇದ್ದುದರಿಂದ ತಮ್ಮ ಕೈಲಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆ. ಈ ಬಾರಿ ಅತಿ ಹೆಚ್ಚು ಮತ ನೀಡಿ ತಮ್ಮನ್ನು ಮರು ಆಯ್ಕೆ ಮಾಡಿದ್ದಾರೆ. ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಆರ್ಯವೈಶ್ಯ ಸೇವಾ ರತ್ನ ಪ್ರಶಸ್ತಿ ಪುರಸ್ಕೃತ ಹಿರಿಯ ಮುಖಂಡ ನಾಗರಾಜ ಶ್ರೇಷ್ಠಿ, ಪುರಸಭಾ ಸದಸ್ಯ ಕೃಷ್ಣರಾಜ ಗುಪ್ತರನ್ನು ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಎಚ್.ಜೆ. ನಾಗಪ್ರಸಾದ್, ಗೌರವ ಕಾರ್ಯದರ್ಶಿ ಎಚ್.ಎಸ್. ಅಜಯ್ಗುಪ್ತ, ಸದಸ್ಯರಾದ ಪಿ. ಸತೀಶ್, ಎಂ.ಆರ್. ಮುರಳಿಕೃಷ್ಣ, ಎಂ.ಎಸ್. ನಾಗರಾಜ್, ಎಚ್.ಎನ್. ಕೃಷ್ಣಮೂರ್ತಿ, ವಿನಯ್, ಎಚ್.ಎನ್. ಸುಬ್ಬರಾಜ್, ಲಕ್ಷ್ಮೀಪ್ರಸಾದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

