ರಾಗಿ ಸಂಶೋಧನೆಗೆ ಒತ್ತು ರಾಮ್ ರಾಜಶೇಖರನ್
ಮೈಸೂರು: ರಾಗಿಯ ಕುರಿತು ಹೆಚ್ಚಿನ ಸಂಶೋಧನೆ ಮಾಡಲಾಗುತ್ತಿದೆ ಎಂದು ಸಿಎಫ್ಟಿಆರ್ಐ ನಿರ್ದೇಶಕ ಪ್ರೊ.ರಾಮ್ ರಾಜಶೇಖರನ್ ಹೇಳಿದರು.
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ ಸೋಮವಾರ ಏರ್ಪಡಿಸಿದ್ದ ರಾಗಿ ಮತ್ತು ಡಯಾಬಿಟೀಸ್ ಹಾಗೂ ಶಾಸನ ಮತ್ತು ಜನಪದದಲ್ಲಿ ರಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕದ ಕೆಲವು ಭಾಗಗಳಲ್ಲಿ ಮಾತ್ರ ರಾಗಿಯನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಆದರೆ ರಾಗಿಯಿಂದ ಆರೋಗ್ಯದ ಮೇಲೆ ಯಾವುದೆ ತೊಂದರೆ ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಗೆ ಮತ್ತು ಹೊರ ದೇಶಗಳಿಗೂ ಪೂರೈಸುವ ನಿಟ್ಟಿನಲ್ಲಿ ಸಂಶೋಧನೆ ನಡೆಸಲಾಗುವುದು ಎಂದರು.
ಕೃತಿಯ ಲೇಖಕ ಪೂರಿಗಾಲಿ ಬಾಲಕೃಷ್ಣನ್ ಮಾತನಾಡಿ, ಸಿಎಫ್ಟಿಆರ್ಐ ಆರಂಭವಾದ 63 ವರ್ಷಗಳಲ್ಲಿ ಕನ್ನಡ ಪುಸ್ತಕ ಬಿಡುಗಡೆ ಕುರಿತ ಇಂಥ ಕಾರ್ಯಕ್ರಮ ನಡೆದಿರಲಿಲ್ಲ. ರಾಗಿಯಿಂದ ಮಧುಮೇಹ ಗುಣವಾಗುತ್ತದೆ ಎಂಬುದನ್ನು ಪೂರ್ಣವಾಗಿ ಒಪ್ಪಲಾಗದು. ಆದರೆ ರಾಗಿ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದರು.
ಪುಸ್ತಕ ಕುರಿತು ಪ್ರೊ.ಅಡ್ಯನಡ್ಕ ಕೃಷ್ಣಭಟ್ ಮಾತನಾಡಿ, ರಾಗಿಯನ್ನು ಸಿರಿಧಾನ್ಯಗಳಲ್ಲಿ ಒಂದು ಎಂದು ಗುರುತಿಸಲಾಗುತ್ತದೆ. ಜಾನಪದದಲ್ಲಿಯೂ ರಾಗಿಯ ಬಗ್ಗೆ ಸಾಕಷ್ಟು ಉಲ್ಲೇಖಗಳಿವೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಮಠಪತಿ ಅಧ್ಯಕ್ಷತೆ ವಹಿಸಿದ್ದರು. ಬಿ.ವಿ. ಸತ್ಯೇಂದ್ರರಾವ್ ಸ್ವಾಗತಿಸಿದರು. ಎ.ಎಸ್.ಕೆ.ವಿ.ಎಸ್. ಶರ್ಮ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

