ನಾಳೆ ವರುಣ ಬಿಜೆಪಿ ಸಭೆ
ಮೈಸೂರು: ಬಿಜೆಪಿ ವರುಣ ವಿಧಾನಸಭಾ ಕ್ಷೇತ್ರದ ಸಭೆ ಫೆ.5ರ ಮಧ್ಯಾಹ್ನ 2ಕ್ಕೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಕ್ಷೇತ್ರದ ಅಧ್ಯಕ್ಷ ಶಿವನಂಜಪ್ಪ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಕ್ಷೇತ್ರದ ಪದಾಧಿಕಾರಿಗಳು, ಜಿಪಂ, ತಾಪಂ, ಗ್ರಾಪಂ, ಎಪಿಎಂಸಿ ಸದಸ್ಯರು, ಸ್ಥಾಯಿ ಸಮಿತಿ, ಶಕ್ತಿ ಕೇಂದ್ರದ ಮುಖಂಡರು ಭಾಗವಹಿಸಬೇಕು ಎಂದು ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ವರುಣ ಮಂಜುನಾಥ್, ಶಿವಬಸಪ್ಪ ಕುಪ್ಪೇಗಾಲ ಕೋರಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ
ಅನಾರೋಗ್ಯದಿಂದ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ದೇವಲಾಪುರದಲ್ಲಿ ನಡೆದಿದೆ. ದೇವಲಾಪುರ ನಿವಾಸಿ ಸಿದ್ದಯ್ಯ ಎಂಬವರ ಪುತ್ರ ನಾಗೇಶ್ (27) ಆತ್ಮಹತ್ಯೆ ಮಾಡಿಕೊಂಡವರು. ನಾಗೇಶ್ ಜ.31 ರಂದು ವಿಷ ಸೇವಿಸಿ ಅಸ್ವಸ್ಥಗೊಂಡು ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೈಸೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಂತನ- ಮಂಥನ ಸಭೆ ನಾಳೆ
ನೇಕಾರ- ಕುರುಹಿನಶೆಟ್ಟಿ ಕ್ಷೇಮಾಭಿವೃದ್ಧಿ ಸಂಘದಲ್ಲಿ ಫೆ.5ರ ಮಧ್ಯಾಹ್ನ 3ಕ್ಕೆ ಅಗ್ರಹಾರದ ಕುರುಹಿನಶೆಟ್ಟಿ ಶ್ರೀರಾಮ ಮಂದಿರದಲ್ಲಿ ಡಾ.ಎಚ್.ಎನ್. ತಿಮ್ಮಶೆಟ್ಟರ ಅಧ್ಯಕ್ಷತೆಯಲ್ಲಿ ಚಿಂತನ- ಮಂಥನ ಸಭೆ ಏರ್ಪಡಿಸಲಾಗಿದೆ. ಜನಾಂಗದ ಏಕತೆ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್. ಸತ್ಯಾನಂದವಿಟ್ಟು ತಿಳಿಸಿದ್ದಾರೆ.
ಗೀತಗಾಯನ
ಕನ್ನಡ ಶ್ರೀ ಕಲಾ ವೃಂದವು 42ನೇ ವಾರ್ಷಿಕೋತ್ಸವ ಅಂಗವಾಗಿ ಗೀತಗಾಯನ ಕಾರ್ಯಕ್ರಮವನ್ನು ಜಗನ್ಮೋಹನ ಅರಮನೆಯಲ್ಲಿ ಫೆ.5ರ ಬೆಳಗ್ಗೆ 11.30ಕ್ಕೆ ಆಯೋಜಿಸಿದೆ. ಗಾಯಕಿ ಅಮೂಲ್ಯ ಗೀತ ಸಂಗಮ ಕಾರ್ಯಕ್ರಮ ನಡೆಸಿಕೊಡಲಿದ್ದು, ಮಧ್ಯಾಹ್ನ 1ಕ್ಕೆ ಶ್ರೀ ಲಕ್ಷ್ಮೀನರಸಿಂಹ ಕೃಪಾ ಪೋಷಿತ ಮಿತ್ರ ಮಂಡಳಿಯಿಂದ ಶನಿಪ್ರಭಾವ ಪೌರಾಣಿಕ ನಾಟಕ ಪ್ರದರ್ಶನ ಇದೆ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

