ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು
ಮೈಸೂರು: ಮಕ್ಕಳ ಪ್ರತಿಭಾ ಶಕ್ತಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ದಕ್ಷಿಣ ವಲಯ ಬಿಇಒ ಬಿ.ಎನ್. ಶಿವರಾಮೇಗೌಡ ಹೇಳಿದರು.
ಕುವೆಂಪುನಗರದ ವೀಣೆ ಶೇಷಣ್ಣ ಭವನದಲ್ಲಿ ನಡೆದ ಪೂರ್ಣಪ್ರಜ್ಞ ವಿದ್ಯಾಶಾಲೆಯ 9ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿ, ಪ್ರತಿ ಮಗುವೂ ಅಮೂಲ್ಯ ಮತ್ತು ಅದ್ಭುತ ಪ್ರತಿಭೆ ಹೊಂದಿರುತ್ತದೆ. ಆದ್ದರಿಂದ ಅವರ ವಿಚಾರ ಮತ್ತು ಪ್ರತಿಭಾ ಶಕ್ತಿಯನ್ನು ಪ್ರೋತ್ಸಾಹಿಸಬೇಕು. ಮಕ್ಕಳ ಅದ್ಭುತ ಶಕ್ತಿ ನಮ್ಮ ಕಲ್ಪನೆಗೂ ನಿಲುಕುವುದಿಲ್ಲ. ಬಾಲ್ಯದಲ್ಲಿಯೇ ಅವರಲ್ಲಿನ ಆಸಕ್ತಿ ಕ್ಷೇತ್ರ ಗುರುತಿಸಿ ನೀರೆರೆಯಬೇಕು ಎಂದು ಸಲಹೆ ನೀಡಿದರು.
ಕಿರುತೆರೆ ಕಲಾವಿದ ವಿಕ್ರಂ ಮಾತನಾಡಿ, ಮಕ್ಕಳು ಭವಿಷ್ಯದಲ್ಲಿ ಏನಾಗಬೇಕು ಎಂಬುದನ್ನು ನಾವು ನಿರ್ಧರಿಸಬಾರದು. ಅವರು ಏನಾಗಬೇಕು ಅಂದುಕೊಳ್ಳುತ್ತಾರೋ ಅದಕ್ಕೆ ನಾವು ಪ್ರೋತ್ಸಾಹ ನೀಡಬೇಕು. ಮುಗ್ಧ ಮಕ್ಕಳನ್ನು ಗೆಳೆಯರಂತೆ ಕಂಡಾಗ ಮಾತ್ರ ಅವರು ನಮ್ಮೊಂದಿಗೆ ಭಾವನೆ ಹಂಚಿಕೊಳ್ಳುತ್ತಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಸಂಜನಾ ಶ್ರೀನಿವಾಸ್, ಮಕ್ಕಳಿಗೆ ಶುಭ ಕೋರಿದರು. ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಯಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಾಗರಿಕ ವೇದಿಕೆ ಗೌರವಾಧ್ಯಕ್ಷ ಜಿ.ಕೆ. ವರದಪ್ಪ, ಶಾಲಾ ಸಮಿತಿ ಅಧ್ಯಕ್ಷ ಜೆ. ಲೋಕೇಶ್, ವೇದಿಕೆ ಕಾರ್ಯದರ್ಶಿ ಕುಳ್ಳೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

