ಮೈಸೂರು

ಮಕ್ಕಳ ಪ್ರತಿಭೆ ಪ್ರಕಾಶಿಸಲಿ

Published On :

ಮೂಗೂರು: ವಿದ್ಯಾರ್ಥಿಗಳು ಭವ್ಯ ಭಾರತದ ನಿರ್ಮಾಣದ ಮುಂದಿನ ಆಧಾರ ಸ್ತಂಭಗಳು, ಈ ದೇಶ ಅಭಿವೃದ್ಧಿ ಜೊತೆಗೆ ವಿಶ್ವದ ಜಾಗತಿಕ ಮಟ್ಟದಲ್ಲಿ ಉನ್ನತಿ ಸಾಧಿಸಬೇಕೆಂದರೆ ಎಲ್ಲ ರಂಗದಲ್ಲೂ ನಿಮ್ಮ ಪ್ರತಿಭೆ ಪ್ರಕಾಶಿಸುವಂತಾಗಬೇಕು ಎಂದು ದೊಡ್ಡಿಂದವಾಡಿ ಶಾಲೆ ಕನ್ನಡ ಪ್ರಾಧ್ಯಾಪಕ ಶಿವಣ್ಣ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವದ ಕ್ರೀಡೆ, ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ದೇಶ ಏನನ್ನು ಅಪೇಕ್ಷಿಸುತ್ತದೆಯೋ ಅದನ್ನು ಕೊಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬೆಳೆಯಬೇಕು. ಸಮಾಜವನ್ನು ರೂಪಿಸತಕ್ಕಂತ ಸಮಾಜಕ್ಕೆ ಸಂಜೀವಿನಿಯಾಗಿ ನಿಲ್ಲುವಂತಹ ನವ ನಾಗರಿಕರನ್ನಾಗಿ ಸೃಷ್ಟಿಸುವ ಕಾರ್ಯ ಈ ಶಾಲೆಗಳಲ್ಲಿ ನಡೆಯುತ್ತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಬೇಕಾದರೆ ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ. ಸ್ಫರ್ಧಾತ್ಮಕ ಯುಗದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಏಕಾಗ್ರತೆ ಅಗತ್ಯ ಎಂದು ಅವರು ಸಲಹೆ ನೀಡಿದರು.
ಪ್ರಾಂಶುಪಾಲ ಬಿ. ಮಹದೇವ ಮಾತನಾಡಿ, ಮೌಲ್ಯಯುತ ಶಿಕ್ಷಣ ಪಡೆಯುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಮೇಲಿನ ಜವಾಬ್ದಾರಿಯನ್ನು ಅರಿತು ಗುರಿ ಸಾಧಿಸುವ ಛಲ ಹೊಂದಬೇಕು ಎಂದು ಹೇಳಿದರು. ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗೌಡರ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ನಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯ ವಿಜೇತ ಮಕ್ಕಳಿಗೆ ರಾಜುಜೋಷಿ ಬಹುಮಾನ ವಿತರಿಸಿದರು. ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲ ಜಗದೀಶಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ತಾಪಂ ಸದಸ್ಯೆ ಪುಟ್ಟಮಾದಮ್ಮ ಸಿಬಿಸಿ ಅಧ್ಯಕ್ಷ ಎಂ.ಪಿ. ಮರಿಸ್ವಾಮಿ, ಮಾಜಿ ಉಪಾಧ್ಯಕ್ಷ ಬಸವಣ್ಣ, ಜ್ಯೋತಿ, ಎನ್‌ಎಸ್‌ಎಸ್ ಯೋಜನಾಧಿಕಾರಿ ಜವರಯ್ಯ, ಕೃಷ್ಣ ಅಧ್ಯಾಪಕ ಕಾವೇರಿ, ಮಂಜು, ವಿದ್ಯಾ, ಶಂಕರ್, ಕೇಶವ್, ಶಂಕರಯ್ಯ, ರಮೇಶ್, ಮಹೇಶ್, ಮಲ್ಲೇಶ್, ಪೋಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.