23 ರಂದು ಬೃಹತ್ ಉದ್ಯೋಗ ಮೇಳ
ಮೈಸೂರು: ಫೆ.23 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಎಂ.ಕೆ. ಸೋಮಶೇಖರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಉದ್ಯೋಗ ಮೇಳ ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬೃಹತ್ ಉದ್ಯೋಗ ಮೇಳದಲ್ಲಿ 200 ರಿಂದ 250 ವಿವಿಧ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಅಥವಾ ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಎರಡು ಸ್ಥಳವನ್ನು ಪರಿಶೀಲಿಸಿ ಸೂಕ್ತ ಸ್ಥಳದಲ್ಲಿ ಉದ್ಯೋಗ ಮೇಳ ಆಯೋಜಿಸುವಂತೆ ಸೂಚಿಸಿದರು.
ಉದ್ಯೋಗದಾತರ ಸಭೆ ಕರೆದು ಉದ್ಯೋಗ ಮೇಳದಲ್ಲಿ ಅವರಿಗೆ ನಿಯೋಜಿಸುವ ಮಳಿಗೆಗಳ ಬಗ್ಗೆ ಮಾಹಿತಿ ನೀಡಬೇಕು. ಅವರ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆ ವಿದ್ಯಾರ್ಹತೆಯ ಬಗ್ಗೆ ಮಾಹಿತಿ ಪಡೆದು ಉದ್ಯೋಗ ಮೇಳದ ದಿನದಂದು ಸೂಚನಾ ಫಲಕದಲ್ಲಿ ಮಾಹಿತಿ ಪ್ರಕಟಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಪ್ರತ್ಯೇಕವಾಗಿ ಉದ್ಯೋಗ ಮೇಳವನ್ನು ನಡೆಸಲು ಚಿಂತಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಎರಡು ದಿನಗಳು ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ಉದ್ಯೋಗ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
ಲೋಪದೋಷ ಉಂಟಾಗದಿರಲಿ: ಉದ್ಯೋಗ ಮೇಳದಲ್ಲಿ ಯಾವುದೇ ಲೋಪ ದೋಷಗಳು ಉಂಟಾಗಬಾರದು. ಅಧಿಕಾರಿಗಳನ್ನೊಳಗೊಂಡ ವಿವಿಧ ಸಮಿತಿ ರಚಿಸಿ, ಜವಾಬ್ದಾರಿಗಳನ್ನು ವಹಿಸಿದರು. ಅಂಗವಿಕಲರಿಗೆ ಉದ್ಯೋಗದ ಅವಕಾಶವಿರುವ ಕಂಪನಿಗಳ ವಿವರಗಳನ್ನು ತಿಳಿದುಕೊಳ್ಳಬೇಕು. ಸೂಚನಾ ಫಲಕದಲ್ಲಿ ಅದರ ಮಾಹಿತಿ ಪ್ರಕಟಿಸಿ, ಅಂಗವಿಕಲರಿಗೆ ಉದ್ಯೋಗ ಮೇಳದ ದಿನದಂದು ಉದ್ಯೋಗದಾತರೊಂದಿಗೆ ಭೇಟಿಯಾಗಲು ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

