ಕನ್ನಡಿಗರಲ್ಲಿ ಪ್ರಯತ್ನದ ಕೊರತೆ
ಮೈಸೂರು: ಕನ್ನಡಿಗರಲ್ಲಿ ಪ್ರಯತ್ನದ ಕೊರತೆ ಹೆಚ್ಚಿದೆ. ಆದ್ದರಿಂದ ಬ್ಯಾಂಕಿಂಗ್ನತ್ತ ಕ್ಷೇತ್ರದಲ್ಲಿ ಕೆಲಸ ಗಿಟ್ಟಿಸಲು ಸಾಧ್ಯವಾಗುತ್ತಿಲ್ಲ ಎಂದು ಕೆನರಾ ಬ್ಯಾಂಕಿನ ವಲಯ ಉಪ ಮಹಾಪ್ರಬಂಧಕ ಡಾ.ಎಸ್.ಟಿ. ರಾಮಚಂದ್ರ ಅಭಿಪ್ರಾಯಪಟ್ಟರು.
ಜ್ಞಾನಬುತ್ತಿ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ಬ್ಯಾಂಕಿಂಗ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭಹಾರೈಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಕಾರ್ಯವ್ಯಾಪ್ತಿಯಲ್ಲಿ ಐಬಿಪಿಎಸ್ ಪರೀಕ್ಷೆ ಬರೆದು ನೇಮಕವಾದ 141 ಮಂದಿಯಲ್ಲಿ ಕೇವಲ ಇಬ್ಬರು ಕನ್ನಡಿಗರಿದ್ದಾರೆ. ಉಳಿದವರೆಲ್ಲ ಜಾರ್ಖಂಡ್, ಉತ್ತರಪ್ರದೇಶ, ದೆಹಲಿ, ಕೇರಳ, ತಮಿಳುನಾಡಿವರೆ ಜಾಸ್ತಿ ಇದ್ದಾರೆ ಎಂದರು.
ಬಹುತೇಕ ಮಂದಿ ಎಂಜಿನಿಯರಿಂಗ್ ಓದಲು ಹೋಗುತ್ತಾರೆ. ಆ ಪದವಿ ಗಳಿಸಿದವರೆ 26 ಸಾವಿರ ಮಾತ್ರ ಸಂಬಳ ಸಿಗುತ್ತದೆ. ಅದೇ ಬ್ಯಾಂಕಿಂಗ್ ಕ್ಷೇತ್ರಕ್ಕೆ ಬಂದರೆ 65 ಸಾವಿರ ಸಂಬಳ ಪಡೆಯಬಹುದು. ಅದಕ್ಕಾಗಿ ನಿರಂತರ ಅಭ್ಯಾಸ ಶ್ರಮ ಬೇಕು. ಬ್ಯಾಂಕಿಂಗ್ ಕ್ಷೇತ್ರ ಪ್ರವೇಶಿಸುವವರು ಸಾಮಾನ್ಯ ಇಂಗ್ಲಿಷ್ ತಿಳಿದುಕೊಂಡು ಐಬಿಪಿಎಸ್ ಪರೀಕ್ಷೆ ಪಾಸ್ ಮಾಡಬೇಕು ಎಂದು ಹೇಳಿದರು.
ಜ್ಞಾನಬುತ್ತಿ ಸಂಸ್ಥೆಯಿಂದ ಹೊರತರಲಾದ ಜ್ಞಾನಸ್ಪಂದನ ಸಂಚಿಕೆ ಬಿಡುಗಡೆಗೊಳಿಸಿದ ಡಿಡಿಪಿಯು ಕೆ.ಎಂ. ಪುಟ್ಟು ಮಾತನಾಡಿ, ವಿದ್ಯಾರ್ಥಿಗಳು ತಂದೆ- ತಾಯಿಗಳ ಆಸೆ ಈಡೇರಿಸಲು ಬದ್ಧರಾಗಬೇಕು. ಸತತ ಓದುವಿನಿಂದ ಜ್ಞಾನ ಪಡೆದುಕೊಂಡು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಯ್ಕೆ ನಿಮ್ಮದಾಗಿದ್ದಲ್ಲಿ ಸೂಕ್ತವಾದ ಉದ್ಯೋಗ ಗಿಟ್ಟಿಸಬಹುದು. ನಿಮಗೆಲ್ಲರಿಗೂ ಶುಭವಾಗಲಿ ಎಂದು ಆಶೀರ್ವದಿಸಿದರು.
ಜ್ಞಾನಬುತ್ತಿ ಸಂಸ್ಥೆಯ ಉಪಾಧ್ಯಕ್ಷ ವೈ.ಎನ್. ಶಂಕರೇಗೌಡ, ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

