ಟಿ. ನರಸೀಪುರ ತಹಸೀಲ್ದಾರ್ ವರ್ಗ ಭರವಸೆ
ಟಿ. ನರಸೀಪುರ: ದಸಂಸ ಪ್ರತಿಭಟನೆಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಮಣಿದು ತಹಸೀಲ್ದಾರರನ್ನು ವರ್ಗಾವಣೆ ಮಾಡುವ ಭರವಸೆ ನೀಡಿದ್ದು, 11 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ದಸಂಸ ಪ್ರತಿಭಟನೆ ಅಂತ್ಯಗೊಂಡಿದೆ.
ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಸಂಸದ ಆರ್. ಧ್ರುವನಾರಾಯಣ ಭೇಟಿ ನೀಡಿ, ಶೀಘ್ರ ತಹಸೀಲ್ದಾರರ ವರ್ಗಾವಣೆಯ ಆದೇಶ ಹೊರಬೀಳಲಿದೆ. ಮುಖಂಡರ ಮೇಲಿನ ಮೊಕದ್ದಮೆ ವಾಪಸ್ ಪಡೆಯಲಾಗುವುದು. ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ, ಜೀತ ವಿಮುಕ್ತ ಪತ್ರ ಕೊಡಿಸುವ ಬಗ್ಗೆ ಭರವಸೆ ನೀಡಿದ್ದರಿಂದ ದಸಂಸ ಧರಣಿ ಹಿಂಪಡೆಯಿತು.
ರಾಜ್ಯದಲ್ಲಿ ದಲಿತರ ಪರವಾದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ದಲಿತ ಸಮುದಾಯಕ್ಕೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಕೊತ್ತೇಗಾಲ ಗ್ರಾಮದಲ್ಲಿ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸರ್ಕಾರ ಯಾವುದೆ ನಿರ್ಲಕ್ಷ್ಯವಹಿಸಿಲ್ಲ. ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರು ತಹಸೀಲ್ದಾರರನ್ನು ವರ್ಗಾವಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಪ್ರಕರಣವನ್ನು ಉನ್ನತ ಅಧಿಕಾರಿಗಳಿಂದ ತನಿಖೆ ಮಾಡಿಸಿದ ನಂತರ ಅಮಾನತಿಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯೊಂದಿಗೆ ಚರ್ಚೆ ನಡೆಸಿ ಪರಿಹಾರ ಹಾಗೂ ಜೀತವಿಮುಕ್ತ ಪ್ರಮಾಣ ಪತ್ರ ಕೊಡಿಸಲಾಗುವುದು. ಮುಖಂಡರ ಮೇಲೆ ದಾಖಲಾದ ಮೊಕದ್ದಮೆಯನ್ನು ತನಿಖಾ ವರದಿ ನಂತರ ಹಿಂಪಡೆಯಲು ಎಸ್ಪಿ ಅವರಿಗೆ ಸೂಚನೆ ನೀಡಲಾಗುವುದು ಹೇಳಿದರು.
ಮಂಡ್ಯ ದಸಂಸ ಸಂಚಾಲಕ ಮಹದೇವಪ್ಪ ಮಾತನಾಡಿ, ತಹಸೀಲ್ದಾರ್ ಎಚ್.ಎಸ್. ಅರುಣಪ್ರಭ ಅವರನ್ನು ವರ್ಗಾವಣೆ ಮಾಡಿ, ಅಮಾನತುಗೊಳಿಸಬೇಕು. ಮತ್ತೆ ಅವರೇನಾದರೂ ನರಸೀಪುರದಲ್ಲಿ ಮುಂದುವರಿದಲ್ಲಿ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಬ್ ಇನ್ಸ್ಪೆಕ್ಟರ್ ಕೆ.ಆರ್. ಗೋಪಿಕೃಷ್ಣ, ಚಾಮರಾಜನಗರ ಎಪಿಎಂಸಿ ಅಧ್ಯಕ್ಷ ಸಿ. ರಾಜಶೇಖರ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಿವಕುಮಾರ, ತಾಲೂಕು ಸಂಚಾಲಕ ಕೆ.ರಾಜು, ಭೀಮರಾಜು, ಸಂಘಟನಾ ಸಂಚಾಲಕ ಸೋಮಶೇಖರ, ಮಹದೇವಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

