ಹೆಚ್ಚಾದ ರಾಜಕೀಯ ಆಸಕ್ತಿ
ಕೆ.ಆರ್. ನಗರ: ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನೇ ಎಂದು ಸಂಸದೆ ರಮ್ಯಾ ಸ್ಪಷ್ಟಪಡಿಸಿದರು.
ಪಟ್ಟಣದ ಗುಬ್ಬಿ ತೋಟದಪ್ಪ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಿ ಮಾತನಾಡಿದ ಅವರು, ಉಪ ಚುನಾವಣೆ ಸಮಯದಲ್ಲಿ ರಾಜಕೀಯ ಬೇಡ ಎಂದಿದ್ದ ನನಗೆ, ಕಳೆದ ಆರು ತಿಂಗಳಿಂದ ಸಾರ್ವಜನಿಕರ ಒಡನಾಟದಲ್ಲಿದ್ದು ರಾಜಕೀಯದ ಆಸಕ್ತಿ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ಗಾಂಧಿ ಅವರ ನಿರ್ದೇಶನದಂತೆ ಯುವಕರಿಗೆ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ಕಷ್ಟ ಸಾಧ್ಯವಾಗಿದೆ. ಇಂತಹ ವ್ಯವಸ್ಥೆಯಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಇದ್ದುಕೊಂಡು ಶಿಕ್ಷಣ ಮುಂದುವರಿಸುತ್ತಿರುವ ವಿದ್ಯಾರ್ಥಿನಿಯರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ವೈಯಕ್ತಿಕವಾಗಿ ಲ್ಯಾಪ್ಟಾಪ್ ನೀಡಿರುವುದಾಗಿ ತಿಳಿಸಿದ ಅವರು, ನಿಲಯದ ಟ್ರಸ್ಟ್ನವರು ಸ್ವಂತ ಕಟ್ಟಡ ನಿರ್ಮಿಸಲು ಮುಂದಾದರೆ ಮುಂದಿನ ಅವಧಿಯಲ್ಲಿ 20 ಲಕ್ಷ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ನನಗೆ ಸಿಕ್ಕಿರುವ ಅಲ್ಪಾವಧಿಯಲ್ಲಿ ಕ್ಷೇತ್ರದ 8 ತಾಲೂಕುಗಳಿಗೂ ಭೇಟಿ ಕೊಟ್ಟು, ಸಮನಾಗಿ ಅನುದಾನ ನೀಡಿರುವುದರ ಜತೆಗೆ ಅಗತ್ಯ ಇರುವ ಕಡೆಗೆ ವೈಯಕ್ತಿಕವಾಗಿಯೂ ಸಹಕಾರ ನೀಡಿದ್ದೇನೆ ಎಂದು ತಿಳಿಸಿದರು. ನಂತರ ಮಂಚನಹಳ್ಳಿ, ದೊಡ್ಡಕೊಪ್ಪಲು, ಗಳಿಗೆಕೆರೆ, ಅಡಗೂರು, ಮಾರಗೌಡನಹಳ್ಳಿ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಂದ ಅಹವಾಲು ಆಲಿಸಿದರು.
ತಾಲೂಕು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ, ಮಾಜಿ ಸದಸ್ಯ ಡಿ.ರವಿಶಂಕರ್, ಬ್ಲಾಕ್ ಕಾಂಗ್ರೆಸ್ ಬಿ.ಎಲ್. ರಾಜಶೇಖರ್, ಪುರಸಭಾ ಮಾಜಿ ಸದಸ್ಯ ವಿಜಯಕುಮಾರ್, ಎಪಿಎಂಸಿ ಉಪಾಧ್ಯಕ್ಷ ತೋಟಪ್ಪನಾಯಕ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್. ಸಿದ್ದೇಗೌಡ, ಛಲವಾದಿ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಶಾಂತಿರಾಜ್, ವಕ್ತಾರ ಎಚ್.ಡಿ. ರಾಘವೇಂದ್ರ, ಮುಖಂಡರಾದ ಬಸವರಾಜು, ನಟರಾಜು, ವೈ.ಎನ್. ಚಂದ್ರಶೇಖರ್, ಕೆ.ಸಿ. ಲೋಕೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

