ಇಂದಿನಿಂದ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ
ಮೈಸೂರು: ಜೆಎಸ್ಎಸ್ ಕಾನೂನು ಕಾಲೇಜು, ಚೆನ್ನೈನ ಸುರಾನ ಮತ್ತು ಸುರಾನ ಅಂತಾರಾಷ್ಟ್ರೀಯ ಕಾನೂನು ಸಂಸ್ಥೆ ಸಹಯೋಗದೊಂದಿಗೆ ಫೆ. 7 ರಿಂದ 9 ರವರೆಗೆ ಕಾಲೇಜಿನ ಸಭಾಂಗಣದಲ್ಲಿ 4ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಫೆ. 7ರ ಸಂಜೆ 5.30ಕ್ಕೆ ಹೈಕೋರ್ಟ್ ನಿವೃತ್ತ ನ್ಯಾ. ಎಂ.ಎಫ್. ಸಲ್ಡಾನಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್. ಬೆಟ್ಕೆರೂರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಸಚಿವ ಡಾ.ಬಿ.ಎಸ್. ರೆಡ್ಡಿ ಅತಿಥಿಯಾಗಿ ಭಾಗವಹಿಸುವರು ಎಂದು ಜೆಎಸ್ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸ್ಪರ್ಧೆಯಲ್ಲಿ ಸುಮಾರು 30 ಪ್ರತಿಷ್ಠಿತ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಕಾನೂನು ವಿಷಯದಲ್ಲಿ ವಿಶೇಷವಾಗಿ ಪ್ರಸ್ತುತ ಸಂದರ್ಭದಲ್ಲಿ ಬಹುಮುಖ್ಯಾವದ ಕಂಪನಿ ವ್ಯವಹಾರಗಳ ಹಾಗೂ ಅಂತಾರಾಷ್ಟ್ರೀಯ ತೆರಿಗೆ ವಿಷಯದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವರು. ಫೆ. 8 ರಂದು ಪೂರ್ವಭಾವಿ ಸುತ್ತುಗಳು ಹಾಗೂ ಫೆ. 9 ರಂದು ಸೆಮಿಫೈನಲ್ ನಡೆಯಲಿದ್ದು, ರಾಜ್ಯದ ಪರಿಣಿತ ಲೆಕ್ಕ ಪರಿಶೋಧಕ, ನ್ಯಾಯಧೀಶರು, ಕಂಪನಿ ಸೆಕ್ರಟರಿಗಳು, ವಕೀಲರು ಈ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸುವರು. ಫೈನಲ್ ಸುತ್ತು ಮಧ್ಯಾಹ್ನ 2ಕ್ಕೆ ನಡೆಯಲಿದ್ದು, ಹೈಕೋರ್ಟ್ನ ನ್ಯಾ. ಎನ್. ಕುಮಾರ್, ತೆರಿಗೆ ಇಲಾಖೆಯ ಅಂತಾರಾಷ್ಟ್ರೀಯ ವಿಭಾಗದ ನಿರ್ದೇಶಕ ಪಿ.ಕೆ. ಪ್ರಸಾದ್ ಭಾಗವಹಿಸುವರು. ಅಂದು ಸಂಜೆ 5.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನ್ಯಾ. ಎನ್. ಕುಮಾರ್ ಪ್ರಧಾನ ಭಾಷಣ ಮಾಡಲಿದ್ದು, ಕರ್ನಾಟ ರಾಜ್ಯ ಕಾನೂನು ವಿವಿ ಕುಲಪತಿ ಡಾ.ಟಿ.ಆರ್. ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸುವರು. ತೆರಿಗೆ ಮೇಲ್ಮನವಿ ಪ್ರಾಧಿಕಾರದ ಹಿರಿಯ ಸದಸ್ಯ ಪ್ರಮೋದ್ಕುಮಾರ್ ಭಾಗವಹಿಸುವರು ಎಂದರು. ಸುರಾನ ಮತ್ತು ಸುರಾನ ಅಂತಾರಾಷ್ಟ್ರೀಯ ಕಾನೂನು ಸಂಸ್ಥೆಯ ಪ್ರೀತಂ ಸುರಾನ, ಸಹಾಯಕ ಪ್ರಾಧ್ಯಾಪಕ ಪ್ರೊ. ನಾಗೇಂದ್ರಮೂರ್ತಿ, ಪ್ರೊ.ಶಿವಾನಂದ ಭಾರತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

