ಮೈಸೂರು

ಜೆಡಿಎಸ್ ಗೋಸುಂಬೆ ರಾಜಕಾರಣಕ್ಕೆ ಅಹಿಂದ ಬಲಿಯಾಗದಿರಲಿ

Published On :

ಮೈಸೂರು: ಜೆಡಿಎಸ್ ಫೆ. 9 ರಂದು ಮೈಸೂರಿನಲ್ಲಿ ಆಯೋಜಿಸಿರುವ ಅಹಿಂದ ಸಮಾವೇಶ ಮುಂಬರುವ ಲೋಕಸಭಾ ಚುನಾವಣೆಯ ರಾಜಕೀಯ ಪ್ರೇರಿತ ಗಿಮಿಕ್ ಆಗಿದ್ದು, ಇದು ನೈತಿಕತೆ ಕಳೆದುಕೊಂಡ ದಳದ ಅರಾಜಕತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ಎಚ್.ಎ. ವೆಂಕಟೇಶ್ ಟೀಕಿಸಿದ್ದಾರೆ.
ಸಿದ್ದರಾಮಯ್ಯ, ಲಕ್ಷ್ಮೀಸಾಗರ್, ಆರ್.ಎಲ್. ಜಾಲಪ್ಪ, ಪಿ. ಕೋದಂಡರಾಮಯ್ಯ ಮುಂತಾದ ನಾಯಕರನ್ನು ಯಾವ ರೀತಿ ದೇವೇಗೌಡರು ನಡೆಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಪಕ್ಷ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗದವರು ಜ್ಞಾಪಕಕ್ಕೆ ಬರುವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಅಹಿಂದ ವರ್ಗದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು ಸರಿಯೇ ಹಾವನೂರು ,ಚಿನ್ನಪ್ಪರೆಡ್‌ಡಿ ಆಯೋಗದ ವರದಿಗಳನ್ನು ವಿರೋಧ ಮಾಡಿದವರಿಗೆ ಹಿಂದುಳಿದ ವರ್ಗದ ಸಮಾವೇಶ ಮಾಡುವ ಯಾವ ನೈತಿಕತೆ ಇದೆ. ಅಹಿಂದ ಸಮಾವೇಶದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರನ್ನೇ ಪಕ್ಷದಿಂದ ಹೊರ ಹಾಕಿದವರಿಂದ ನ್ಯಾಯ ಸಿಗಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ. ಹಿಂದುಳಿದ ವರ್ಗಗಳ ಜನತೆ ಜೆಡಿಎಸ್ ನಡೆಸುತ್ತಿರುವ ಗೋಸುಂಬೆ ರಾಜಕಾರಣದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಸರ್ಕಾರ ಆರೋಗ್ಯ ಮತ್ತು ಆಹಾರ ಭದ್ರತೆ ಒದಗಿಸುವ ಮೂಲಕ ಜನರಿಗೆ ಚೈತನ್ಯ ತುಂಬಿದೆ. ಅಹಿಂದ ವರ್ಗಕ್ಕೆ ಮಾಡುತ್ತಿರುವ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.
9 ರಂದು ಜೆಡಿಎಸ್‌ನಿಂದ ಹಿಂದುಳಿದವರ ಸಮಾವೇಶ
ಜೆಡಿಎಸ್ ವತಿಯಿಂದ ಫೆ. 9 ರಂದು ಆಯೋಜಿಸಿರುವ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಯಾವುದೆ ವ್ಯಕ್ತಿಯ ಅಥವಾ ಪಕ್ಷದ ವಿರುದ್ಧವಾಗಿ ಈ ಸಮಾವೇಶ ಆಯೋಜಿಸಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಪಕ್ಷ ಹಲವು ಸಮಾವೇಶ ನಡೆಸಿದೆ. ಅದರಂತೆ ಮೈಸೂರಿನಲ್ಲಿ ಹಿಂದುಳಿದವರಿಗಾಗಿ ಸಮಾವೇಶ ಆಯೋಜಿಸಿದ್ದೇವೆ. ಇದು ಯಾವುದೆ ವ್ಯಕ್ತಿ ಅಥವಾ ಪಕ್ಷದ ವಿರುದ್ಧ ಎಂದು ತಿಳಿಯಬಾರದು.
ಈಗ ಕಾಂಗ್ರೆಸ್- ಬಿಜೆಪಿ ಹೊರತಾಗಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾದೇಶಿಕ ಪಕ್ಷಗಳಿಗೆ ಜನ ಮನ್ನಣೆ ನೀಡುತ್ತಾರೆ ಎಂದರು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗವಹಿಸುತ್ತಿದ್ದಾರೆ. ಹಿಂದುಳಿದವರು ಕೇವಲ ಒಂದು ಪಕ್ಷಕ್ಕೆ ಸೀಮಿತ ಎಂದು ತಿಳಿಯಬಾರದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.