ಮೈಸೂರು

ನರೇಂದ್ರ ಮೋದಿ ಅಲೆ ಕೊಚ್ಚಿ ಹೋಗಲಿದೆ: ಹರೀಶ್‌ಗೌಡ

Published On :

ಹುಣಸೂರು: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರದ ದುರಾಡಳಿತ ಕಾರ್ಯವೈಖರಿಯಿಂದ ಮೋದಿ  ಅಲೆಯು ಗಾಳಿಯಲ್ಲಿ ಕೊಚ್ಚಿ ಹೋಗಲಿದೆ ಎಂದು ಎಂಡಿಸಿಸಿ ಬ್ಯಾಂಕಿನ ನಿರ್ದೇಶಕ ಜಿ.ಡಿ. ಹರೀಶ್‌ಗೌಡ ಹೇಳಿದರು.
ಪಟ್ಟಣದ ಜೆಡಿಎಸ್ ಕಚೇರಿ ಅವರಣದಲ್ಲಿ ನಡೆದ ಹಿಂದುಳಿದ ವರ್ಗದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ಬೆಲೆ ಏರಿಕೆ ಮತ್ತು ಹಗರಣಗಳ ಸರಮಾಲೆಯ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಜೆಡಿಎಸ್‌ನ್ನು ಮತದಾರರು ಬೆಂಬಲಿಸಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವಂತೆ ಅವರು ಕೋರಿದರು.
ರಾಜ್ಯಮಟ್ಟದ ಜೆಡಿಎಸ್ ಮಹಿಳಾ ಸಮಾವೇಶ ತುಮಕೂರಿನಲ್ಲಿ, ಯುವ ಜೆಡಿಎಸ್ ಸಮಾವೇಶ ಬೆಂಗಳೂರಿನಲ್ಲಿ ನಡೆದ ಸಮಾರಂಭದ ಯಶಸ್ವಿಯಿಂದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಫೆ. 9 ರಂದು ಹಮ್ಮಿಕೊಳ್ಳಲಾಗಿದೆ. ಹುಣಸೂರು ತಾಲೂಕಿನಿಂದ 15 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಬೇಕು ಎಂದು ಕೋರಿದರು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗೇಗೌಡ, ಜಿಪಂ ಸದಸ್ಯರಾದ ದೇವರಾಜು, ಕೆ.ಎಂ. ಮಂಜು, ಜಿಪಂ ಮಾಜಿ ಸದಸ್ಯ ಬಿ.ಕೆ. ಪರಮೇಶ್, ಮುಖಂಡರಾದ ಅಸ್ವಾಳು ಕೆಂಪೇಗೌಡ, ಬಸವಲಿಂಗಯ್ಯ, ಪುಟ್ಟಮಾದಯ್ಯ, ತಿಮ್ಮನಾಯ್ಕ, ಕಲ್ಕುಣಿಕೆ ರಮೇಶ್, ಆರ್. ಸ್ವಾಮಿ, ಪುಟ್ಟರಾಜು, ಎಚ್.ಪಿ. ಸತೀಶ್‌ಕುಮಾರ್, ಗೋವಿಂದೇಗೌಡ, ಆರ್. ವಿಶ್ವನಾಥ್, ಹಜರತ್ ಜಾನ್, ಪುಣ್ಯಶೀಲ, ಶರವಣ, ಚಂದ್ರನಾಯ್ಕ, ದೇವರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.