ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಮೈಸೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಹಾರಾಜ ಜೂನಿಯರ್ ಕಾಲೇಜು ಬಳಿ ಗುರುವಾರ ಪ್ರತಿಭಟಿಸಿದರು.
ಅತಿಥಿ ಉಪನ್ಯಾಸಕರಿಗೆ ವಾರಕ್ಕೆ 16 ಗಂಟೆ ಪಾಠ ಮಾಡುತ್ತಿದ್ದು, ಇವರಿಗೆ ತಿಂಗಳಿಗೆ 25,000 ರು. ವೇತನ ನೀಡಿ ಗೌರವದಿಂದ ನಡೆಸಿಕೊಳ್ಳಬೇಕು. ಪದವಿಪೂರ್ವ, ಪದವಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಕಾಯಂ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಲು ಮೂಲಭೂತ ಸೌಲಭ್ಯಗಳಾದ ಕೊಠಡಿ, ಶೌಚಾಲಯ, ಕಂಪ್ಯೂಟರ್ ಲ್ಯಾಬ್, ಅಂತರ್ಜಾಲ ಸಂಪರ್ಕ, ಗ್ರಂಥಾಲಯ, ಕೌಶಲ್ಯ ವೃದ್ಧಿಯಂತಹ ಯೋಜನೆಗಳನ್ನು ತುರ್ತಾಗಿ ಜಾರಿಗೊಳಿಸಬೇಕು. ರಾಜ್ಯದ ಎಲ್ಲ ಹೊಸ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಕಲಭ್ಯಕ್ಕಾಗಿ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಕೆ. ರಾಕೇಶ್, ಸ್ವಾತಿ, ಮಾಧುರಿ, ತೇಜಸ್ವಿನಿ, ಮಹದೇವಪ್ರಸಾದ್, ಮಹದೇವ, ಕೃಷ್ಣ, ನೀಲಕಂಠ, ಚಂದ್ರನಾಯಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

