ಬುದ್ಧ, ಅಂಬೇಡ್ಕರ್ ಚಿಂತನೆ ಅನುಷ್ಠಾನಕ್ಕೆ ತನ್ನಿ
ಮೈಸೂರು: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ರೂಢಿಸಿಕೊಂಡು ಮಹಾನ್ ಮಾನವತಾವಾದಿಗಳಾದ ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತಂದು ಸಾಮಾಜಿಕ ಬದಲಾವಣೆ ನಾಂದಿ ಹಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಕರೆ ನೀಡಿದರು.
ಶುಕ್ರವಾರ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ತರಲಾದ ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿಂತಕರನ್ನು ಹಾಡು, ಸ್ಫುರಣೆ ಮೂಲಕ ಸ್ಮರಿಸಿಕೊಳ್ಳುವುದಲ್ಲ. ಅವರ ತತ್ವ, ಚಿಂತನೆಗಳನ್ನು ತಾವು ಅಳವಡಿಸಿಕೊಂಡು ಕ್ರಿಯೆಗೆ ತಂದಾಗ ಸಾರ್ಥಕವಾಗುತ್ತದೆ. ಈಗಿನ ವಿದ್ಯಾರ್ಥಿಗಳಲ್ಲಿ ಅಂತಹ ಬದ್ಧತೆ ಕೊರತೆ ಇದೆ ಎಂದರು.
ಬುದ್ಧ, ಬಸವ, ಅಂಬೇಡ್ಕರ್ ಸಮಾಜ ಕಟ್ಟುವಲ್ಲಿ ಅವಿರತ ಶ್ರಮವಹಿಸಿದ್ದಾರೆ. ಆದ್ದರಿಂದಲೇ ನಮಗೆ ಮೀಸಲಾತಿ ದೊರಕಿತು. ಇಷ್ಟೆಲ್ಲಾ ಸೌಲಭ್ಯ ಅನುಭವಿಸುತ್ತಿರುವ ನಾವು ಈ ಮೂವರ ಬಗ್ಗೆ ಎಷ್ಟು ತಿಳಿದುಕೊಂಡಿದ್ದೇವೆ ಎಂಬ ಪ್ರಶ್ನೆಯನ್ನು ನಮಗೆ ನಾವೇ ಹಾಕಿಕೊಳ್ಳಬೇಕು. ಜೀವನದಲ್ಲಿ ಬದ್ಧತೆ ಹೊಂದಿದಲ್ಲಿ ಮಾತ್ರ ಇಂತಹ ವ್ಯಕ್ತಿಗಳ ಕಾರ್ಯಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಶಿಕ್ಷಣದಿಂದ ಜಗತ್ತು ಗೆಲ್ಲಲ್ಲು ಸಾಧ್ಯ: ಶಿಕ್ಷಣದಿಂದ ಮಾತ್ರ ಜಗತ್ತನ್ನು ಗೆಲ್ಲಲು ಸಾಧ್ಯ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಕೆಲವು ಮಂದಿಗೆ ಶಿಕ್ಷಣ ಕಷ್ಟಸಾಧ್ಯವಾಗುತ್ತದೆ. ಅದನ್ನು ಮೀರಿಯೂ ನಾವು ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು. ಅಂಬೇಡ್ಕರ್ ಅವರ ಚಿಂತನೆಯೂ ಕೂಡ ಇದನ್ನೇ ಹೇಳುತ್ತದೆ ಎಂದರು.
ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ, ಕುಲಸಚಿವ ಪ್ರೊ.ಸಿ. ಬಸವರಾಜು, ಪತ್ರಿಕೋದ್ಯಮಿ ರಾಜಶೇಖರ ಕೋಟಿ, ಕೊಳ್ಳೇಗಾಲ ಶಾಸಕ ಎಸ್. ಜಯಣ್ಣ, ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ. ಮಹೇಶ್ ಚಂದ್ರಗುರು, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ದಯಾನಂದ ಮಾನೆ, ಮಾಜಿ ಮೇಯರ್ ಪುರುಷೋತ್ತಮ್, ಮೈಸೂರು ವಿವಿ ಡೀನ್, ಪ್ರೊ.ಎಂ. ರುದ್ರಯ್ಯ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅರುಣ್ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

