ಮೈಸೂರು

ಮಾರ್ಚ್ ಒಳಗೆ ಕಾಮಗಾರಿ ಮುಗಿಸಿ

Published On :

ಎಚ್.ಡಿ. ಕೋಟೆ: ಈಗಾಗಲೇ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವಂತೆ ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಇಲಾಖೆ ಮಾಹಿತಿಯಿಂದ ಈ ಬಾರಿ ತಾಲೂಕು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸಾಧ್ಯವಾಗಲಿಲ್ಲ. ತಾಲೂಕಿನಲ್ಲಿ ಇರುವ ಬಹಳಷ್ಟು ಕೆರೆಗಳು ಬರಿದಾಗಿವೆ. ಈ ಬಾರಿಯ ಬೇಸಿಗೆಯಲ್ಲಿ ಜಾನುವಾರುಗಳಿಗೆ ನೀರಿನ ಸಮಸ್ಯೆಯು ಉಂಟಾಗಲಿದೆ. ಕೆರೆಗಳಲ್ಲಿ ನೀರು ಇಲ್ಲದೇ ಇರುವುದರಿಂದ ಅಂತರ್ಜಲ ಮಟ್ಟವು ಸಹ ಕುಸಿಯಲಿದೆ ಎಂದರಿ.
ತಾಲೂಕಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಬೋರ್‌ವೆಲ್‌ಗಳನ್ನು ಕೊರೆಯಲಾಗಿದ್ದು ಎಲ್ಲಾ ಬೋರ್‌ವೆಲ್‌ಗಳಿಗೂ ಮಾರ್ಚ್ ಅಂತ್ಯದ ಒಳಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ತಿಳಿಸಿದರು. ತಾಲೂಕು ಹಿಂದುಳಿದಿದ್ದರೂ ಸಹ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲೂಕಿನಲ್ಲಿ ಒಟ್ಟು 287 ಶಿಕ್ಷಕರ ಕೊರತೆ ಇರುವುದು ತಮ್ಮ ಗಮನಕ್ಕೆ ಬಂದಿದೆ. ಇವರ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ವಹಿಸಬೇಕು. ಜಿಪಂ ವತಿಯಿಂದ ಅಪೂರ್ಣಗೊಂಡಿರುವ ಎಲ್ಲಾ ಕುಡಿಯುವ ನೀರು ಕಾಮಗಾರಿಯನ್ನ ಪೂರ್ಣಗೊಳಿಸಬೇಕು ಎಂದು ಸೂಚಿಸಿದ ಅವರು, ವಿದ್ಯಾರ್ಥಿನಿಲಯಗಳ ಬಗ್ಗೆ ವಿದ್ಯಾರ್ಥಿಗಳಿಂದ ದೂರು ಕೇಳಿ ಬರುತ್ತಿದ್ದು, ಈಗಲಾದರು ನಿಲಯಪಾಲಕರು ಎಚ್ಚೆತ್ತು ಕೆಲಸ ಮಾಡಬೇಕು. ತಪ್ಪಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಜಿಪಂ ಸದಸ್ಯರಾದ ಭಾಗ್ಯಲಕ್ಷ್ಮಿ, ಪದ್ಮ ಬಸವರಾಜು, ನಂದಿನಿ ಚಂದ್ರಶೇಖರ್, ತಹಸೀಲ್ದಾರ್ ಕೃಷ್ಣ, ಇಒ ಲಿಂಗರಾಜು ತಾಲೂಕು ಮಟ್ಟದ ಅದಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.