ಮೈಸೂರು

ರು. 1.40 ಕೋಟಿ ಕಾಮಗಾರಿಗೆ ಚಾಲನೆ

Published On :

ನಂಜನಗೂಡು: ತಾಲೂಕು ಹಾಗೂ ವರುಣ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂದಾಜು 1.40 ಕೋಟಿ ರು. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಸಂಸದ ಆರ್. ಧ್ರುವನಾರಾಯಣ್ ಚಾಲನೆ ನೀಡಿದರು.
ದಾಸನೂರು ಗ್ರಾಮದಲ್ಲಿ ಭೂಮಿ ಪೂಜೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಸಹಾಯ ನೀಡುವ ದೃಷ್ಟಿಯಿಂದ ರೇಲ್ವೆ ಪ್ರಯಾಣದ ಸಬ್ಸಿಡಿಯಲ್ಲಿ ಈ ಭಾಗದ 6 ಸಾವಿರ ಮಂದಿ ರಾಜ್ಯದಲ್ಲಿ 36 ಸಾವಿರ ಬಡವರು ಪ್ರತಿನಿತ್ಯ ಪ್ರಯಾಣಿಸುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಕೊಡುಗೆಯಲ್ಲವೆ. ಬೇಸಿಗೆ ಬರುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ಸಂಭವವಿದ್ದು, ಗುತ್ತಿಗೆದಾರರು, ಅಧಿಕಾರಿಗಳು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಿ ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಕಾಂಗ್ರೆಸ್ ಮುಖಂಡ ರಾಕೇಶ್ ಸಿದ್ದರಾಮಯ್ಯ, ಜಿಪಂ ಮಾಜಿ ಅಧ್ಯಕ್ಷ ಸಿದ್ದವೀರಪ್ಪ, ಎಸ್.ಸಿ. ಬಸವರಾಜು, ಧರ್ಮೇಂದ್ರ, ಆಶಾ ನಾಗೇಶ್, ಮಾಲೇಗೌಡ, ಹಾಡ್ಯ ರಂಗಸ್ವಾಮಿ, ಎಇಇ ರಾಮಕೃಷ್ಣಪ್ಪ, ಅಧಿಕಾರಿಗಳಾದ ಕುಮಾರಸ್ವಾಮಿ, ಎಂ. ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಚಂದ್ರಕಾಂತ್, ಶಿವಲಿಂಗಪ್ಪ, ಗೀತಾಲಕ್ಷ್ಮಿ, ಗಣೇಶ್, ಎಸ್‌ಐ ಮಹೇಶ್, ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.