ವಾಲ್ಮೀಕಿ ಭವನ ನಿರ್ಮಾಣಕ್ಕೆ ನೆರವು: ಶಾಸಕ ಧರ್ಮಸೇನ
ಟಿ. ನರಸೀಪುರ: ನಿರ್ಮಾಣ ಹಂತದಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ವಿಧಾನ ಪರಿಷತ್ ಸದಸ್ಯರ ನಿಧಿಯಿಂದಲೇ ನೆರವು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ ಹೇಳಿದರು.
ಪಟ್ಟಣದ ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು, ತಾಲೂಕು ನಾಯಕ ಸಂಘದ ಮುಖಂಡರು ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ 20 ಲಕ್ಷ ರು. ಅನುದಾನದ ನೆರವು ನೀಡುವಂತೆ ಕೇಳಿದ್ದರು. ತಮ್ಮೊಬ್ಬರಿಂದಲೇ ಇಷ್ಟೊಂದು ಅನುದಾನ ನೀಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿರುವ 7 ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪರಿಷತ್‌ನ ಇನ್ನುಳಿದ ಸದಸ್ಯರಿಂದಲೂ ಅನುದಾನ ಕ್ರೋಡಿಕರಿಸಿ ಭವನ ಕಾಮಗಾರಿ ಪೂರ್ಣಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಹರ್ಷಿ ವಾಲ್ಮೀಕಿ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು. ನರಸೀಪುರ ಪಟ್ಟಣ ನಗರದ ಮಾದರಿಯಲ್ಲಿ ಬೆಳೆಯುತ್ತಿದ್ದು, ನಿವಾಸಿಗಳು ನೈರ್ಮಲ್ಯಕ್ಕೆ ಪ್ರಾಮುಖ್ಯತೆ ಕೊಡಬೇಕು. ಮುಖ್ಯಮಂತ್ರಿಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆಯಿರಲಿ, ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದರು.
ನಂತರ ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆಗೆ ಆಗಮಿಸಿ, ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡಿದ ಆರ್. ಧರ್ಮಸೇನ ಅವರನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೊನ್ನನಾಯ್ಕ ಸನ್ಮಾನಿಸಿದರು.
ಭೈರಾಪುರ ಜಿಪಂ ಕ್ಷೇತ್ರದ ಸದಸ್ಯೆ ರೇಣುಕಾ ನಾಗರಾಜು, ಮಾಜಿ ಸದಸ್ಯೆ ಸುಧಾಮಣಿ, ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಲಗೂಡು ನಾಗರಾಜು, ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಟಿ.ಆರ್. ಜಯರಾಮು, ಮುಖ್ಯ ಶಿಕ್ಷಕಿ ಬಿ.ಎಂ. ಮಂಜುಳ, ಮುಖಂಡ ಸುಬ್ಬನಾಯ್ಕ, ಚಿನ್ನಸ್ವಾಮಿ, ರಾಜು, ಪಿ. ಶಶಿಧರ, ಗವಿನಾಯ್ಕ, ಬಸವರಾಜು, ನಾಗರಾಜು, ರವಿ, ಬಸವಣ್ಣ, ಮಹೇಶ್, ದೇವರಾಜು, ಶಿಕ್ಷಕರಾದ ಮಮತಾ, ಪುಷ್ಪಲತಾ, ದಿವ್ಯ, ನಂದಿನಿ, ಚಿತ್ರ, ಸೌಮ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

