ರಾಜಕಾರಣದಲ್ಲಿ ಏನು ಬೇಕಾದ್ರೂ ಆಗಬಹುದು
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಮತ್ತೆ ಪ್ರಧಾನಿ ಆಗುವ ಆಸೆ ಇಲ್ಲದಿರಬಹುದು. ಆದರೆ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೃತೀಯ ರಂಗದಿಂದ ಪ್ರಧಾನಿ ಅಭ್ಯರ್ಥಿ ಯಾರೆಂದು ಈಗಲೇ ಘೋಷಿಸುವುದು ಸರಿಯಲ್ಲ. ಚುನಾವಣಾ ಫಲಿತಾಂಶ ಬಂದ ನಂತರ ಪ್ರಧಾನಿ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಸಿಪಿಎಂ ನಾಯಕರು ಹೇಳಿಕೆ ನೀಡಿದ್ದಾರೆ. ಆದರೂ ಸಹ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದರು. ಲೋಕಸಭಾ ಚುನಾವಣೆ ಘೋಷಣೆಗೂ ಮೊದಲೇ ತೃತೀಯ ರಂಗದ ಸ್ವರೂಪ ನಿರ್ಧರಿಸಲಾಗುವುದು ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ 15-16 ಸ್ಥಾನ ಗೆಲ್ಲುವ ಗುರಿ ತಲುಪಿದರೇ ಕರ್ನಾಟಕಕ್ಕೆ ಅವಕಾಶ ಸಿಗಬಹುದು. ಇದರಿಂದ ಕರ್ನಾಟಕದ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಬಹುದು. ತೃತೀಯ ರಂಗದಲ್ಲಿ ಸ್ಥಳೀಯ ಸಣ್ಣಪುಟ್ಟ ಪಕ್ಷಗಳೊಂದಿಗೆ ಸೇರಿ ಕೆಲಸ ಮಾಡಲು ಮುಕ್ತ ಅವಕಾಶವಿದೆ. ಆದರೆ, ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿರುವ ಪಕ್ಷಗಳೊಂದಿಗೆ (ಬಿಎಸ್ಆರ್ ಕಾಂಗ್ರೆಸ್) ಕೈ ಜೋಡಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ತೃತೀಯ ರಂಗಕ್ಕೆ ಸ್ಪಷ್ಟ ಸ್ವರೂಪ ನೀಡುವ ಸಂಬಂಧ ದೆಹಲಿಯಲ್ಲಿ ಫೆ.10, 11 ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಚುನಾವಣೆ ಘೋಷಣೆ ಮುನ್ನವೆ ತೃತೀಯ ರಂಗ ರಚನೆ ಆಗಲಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸಲು ಸಿದ್ದವಾಗಿದ್ದೇವೆ. ಮಿತ್ರ ಪಕ್ಷಗಳಾದ ಸಮಾಜವಾದಿ, ಕಮ್ಯುನಿಸ್ಟ್ ಅಭ್ಯರ್ಥಿಗಳಿಗೆ ಕೆಲವು ಕ್ಷೇತ್ರಗಳನ್ನು ಬಿಟ್ಟು ಕೊಡಬೇಕಾಗಿದೆ. ಇದೇ ತಿಂಗಳಿನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಂತಿಮ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಕೈಗೊಳ್ಳುವರು ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 40 ಮಂದಿ ಶಾಸಕರೂ ಸಹ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇವೆ. ಆದರೆ, ಅನಿವಾರ್ಯವಾದಲ್ಲಿ ಒಂದೆರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಸ್ಪರ್ಧೆಗೆ ಇಳಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

