ಸಾಧಕರಿಗೆ ಕರ್ನಾಟಕ ಕಲ್ಪವೃಕ್ಷ ಪ್ರಶಸ್ತಿ
ಮೈಸೂರು: ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕರ್ನಾಟಕ ಕಲ್ಪವೃಕ್ಷ ಪ್ರಶಸ್ತಿ ನೀಡಿ ಶನಿವಾರ ಗೌರವಿಸಲಾಯಿತು.
ಕಲ್ಪವೃಕ್ಷ ಟ್ರಸ್ಟ್ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿವಿ ಕುಲಪತಿ ಡಾ. ಕೆ. ನಾರಾಯಣಗೌಡ, ಧಾರವಾಡದ ಸಾಹಿತಿ ಡಾ. ಗಿರಡ್ಡಿ ಗೋವಿಂದರಾಜು ಹಾಗೂ ಮೈಸೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ನಿವೃತ್ತ ನಿರ್ದೇಶಕಿ ಡಾ. ಗೀತಾ ಅವಧಾನಿ ಅವರಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮೈಸೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಎಸ್.ಎನ್. ಹೆಗ್ಡೆ, ಅನ್ನದಾತರು, ಆರೋಗ್ಯದಾತರು ಹಾಗೂ ಅಕ್ಷರದಾತರನ್ನು ಗುರುತಿಸಿ ಗೌರವಿಸುತ್ತಿರುವುದಪ ಅಭಿನಂದನೀಯ. ಸಾಧಕರ ಅನುಭವಗಳು ಹಾಗೂ ಸೇವೆಗಳು ಸಮಾಜಕ್ಕೆ ಮತ್ತಷ್ಟು ಕೊಡುಗೆಯಾಗಲಿ ಎಂದು ಆಶಿಸಿದರು. ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಅಧ್ಯಕ್ಷ ಡಾ. ಎಚ್.ಬಿ. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಡಾ. ವಸಂತಕುಮಾರ್ ತಿಮಕಾಪುರ ಇದ್ದರು. ಡಾ. ವೈ.ಡಿ. ರಾಜಣ್ಣ ನಿರೂಪಿಸಿದರು. ಮಂಡ್ಯದ ಯರಹಳ್ಳಿ ಪುಟ್ಟಸ್ವಾಮಿ ನೇತೃತ್ವದ ಸಮರ್ಪಣಾ ತಂಡದವರು ಜನಪದ ಗೀತಾ ಗಾಯನ ನಡೆಸಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

