ಮೈಸೂರು

ಕೆರೆ ಹೂಳೆತ್ತದೆ ಹಣ ಡ್ರಾ: ಆರೋಪ

Published On :

ಕೆ.ಆರ್. ನಗರ: ತಾಲೂಕಿನ ದೊಡ್ಡೇಕೊಪ್ಪಲು ಗ್ರಾಪಂ ಅಧ್ಯಕ್ಷ ಬಿ.ಎಂ. ಗಿರೀಶ್ ಮತ್ತು ಅಭಿವೃದ್ಧಿ ಅಧಿಕಾರಿ ಚಿದಾನಂದ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು ವರ್ಗ ಒಂದರ ಹಣವನ್ನು ಚೌಕಹಳ್ಳಿ ಗ್ರಾಮದ ಬಳಿ ಇರುವ ಕೆರೆ ಹೂಳೆತ್ತದೆ ಅಕ್ರಮವಾಗಿ ಡ್ರಾ ಮಾಡಿಕೊಂಡಿದ್ದಾರೆ ಎಂದು ಗ್ರಾಪಂ ಸದಸ್ಯರು ಆರೋಪಿಸಿದ್ದಾರೆ.
2013-14ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಡೋರ್ನಹಳ್ಳಿ- ದೊಡ್ಡೇಕೊಪ್ಪಲು ಗ್ರಾಮದ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರಿಂದ ಮಾಡಿಸದೆ ಅಕ್ರವಾಗಿ ಜೆಸಿಬಿ ಯಂತ್ರದಿಂದ ಮಾಡಿಸಿದ್ದಾರೆ ಎಂದು ನೀಡಿರುವ ಸದಸ್ಯರಾದ ಸಿ.ಎ. ರಾಜು, ಮಹದೇವಿ, ಬಸವರಾಜನಾಯ್ಕ, ಶಿವಮ್ಮ ಮತ್ತು ರವಿ ದೂರಿದ್ದಾರೆ.
2013ರ ಡಿ. 6ರಂದು ನಡೆದ ಸಾಮಾನ್ಯ ಸಭೆಯಲ್ಲಿ ನಡಾವಳಿಯನ್ನು ಪುಸ್ತಕದಲ್ಲಿ ದಾಖಲಿಸಿದ ನಂತರ ನಿಯಮ ಬಾಹಿರವಾಗಿ ಕಾಮಗಾರಿ ವಿಷಯ ದಾಖಲಿಸಿ ಸರ್ಕಾರದ ಲಕ್ಷಾಂತರ ರು.ಗಳನ್ನು ದುರ್ಬಳಕೆ ಮಾಡಿಕೊಂಡಿರುವ ಅಧ್ಯಕ್ಷ ಮತ್ತು ಅಭಿವೃದ್ಧಿ ಅಧಿಕಾರಿ ವಿರುದ್ದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಪಂಚಾಯ್ತಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಪ್ರಶ್ನಿಸುವ ಸಾಮಾನ್ಯ ಜನರಿಗೆ ಮತ್ತು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೇಳುವವರಿಗೆ ರಾಜಕೀಯ ಬಲ ಬಳಸಿ, ಸುಳ್ಳು ಮೊಕದ್ದಮೆ ದಾಖಲಿಸಿ ಹೆದರಿಸುವ ಅಧ್ಯಕ್ಷ ಬಿ.ಎಂ. ಗಿರೀಶ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಈ ದುರಾಡಳಿತದ ವಿರುದ್ದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.