ಮೈಸೂರು

16ರಂದು ಉದ್ಯೋಗ ಮೇಳ

Published On :

ಮೈಸೂರು: ಕುವೆಂಪುನಗರ ಜೋಡಿ ರಸ್ತೆಯಲ್ಲಿರುವ ಎಡುಕೇರ್ ಐಟಿಇಎಸ್ ಸಂಸ್ಥೆಯು ಫೆ.16ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಮೇಳವನ್ನು ಅಂದು ಬೆಳಗ್ಗೆ 10ಕ್ಕೆ ಉದ್ಘಾಟಿಸಲಾಗುವುದು. ಉದ್ಯೋಗ ಮೇಳವು ಉಚಿತವಾಗಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಬಿಇ ಮತ್ತು ಎಂಬಿಎ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುವುದು. 1 ಸಾವಿರ ಮಂದಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎಂದು ಎಡುಕೇರ್ ಐಟಿಇಎಸ್ ನಿರ್ದೇಶಕಿ ರಚನಾ ಮಹೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಸಕ್ತರು ಫೆ.12ರೊಳಗೆ ನೋಂದಾಯಿಸಿಕೊಳ್ಳಬೇಕು. ಸಂದರ್ಶನವನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಫೆ.15ರಂದು ಸಂಸ್ಥೆಯಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ. 99867 23434, 98867 00027.

ಸ್ವರ್ಣ ಪ್ರಾಶನ
ಸರಸ್ವತಿಪುರಂನಲ್ಲಿರುವ ದೀಕ್ಷಿತ್ ಹೆಲ್ತ್ ಕ್ಲಿನಿಕ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ಫೆ.13ರ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಹಾಗೂ ಗೋಕುಲಂನಲ್ಲಿರುವ ಆಯುರ್ವೇದಾಂತ ಕ್ಲಿನಿಕ್ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸ್ವರ್ಣ ಪ್ರಾಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.