ಕಬ್ಬಿನ ಗದ್ದೆಗೆ ಬೆಂಕಿ: ಅಪಾರ ನಷ್ಟ
ಎಚ್.ಡಿ. ಕೋಟೆ: ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ ಕಟಾವಿಗೆ ಬಂದಿದ್ದ ಅಪಾರ ಪ್ರಮಾಣದ ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಮ್ಮ ಎಂಬವರ ನಾಲ್ಕು ಎಕರೆ, ಕಮಲಮ್ಮ ಅವರ ಎರಡೂವರೆ ಎಕರೆ ಮತ್ತು ನಿಂಗೇಗೌಡ ಅವರ ಎರಡೂವರೆ ಎಕರೆ ಬೆಂಕಿ ತಗುಲಿದೆ. ಮಂಗಳವಾರ ಬೆಳಗ್ಗೆ 11ರ ಸುಮಾರಿನಲ್ಲಿ ಕಬ್ಬಿನ ಗದ್ದೆಯ ಮಧ್ಯೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡರಿಸಿ ಬಿದ್ದ ಪರಿಣಾಮ ಕಬ್ಬಿನ ಬೆಳೆಗೆ ಬೆಂಕಿ ತಗುಲಿದೆ. ಇದರಿಂದ ಸುಮಾರು 9 ಎಕರೆಯಷ್ಟು ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿದೆ. ಕೂಡಲೆ ಪಟ್ಟಣದ ಅಗ್ನಿಶಾಮಕ ಠಾಣೆಗೆ ದೂರು ನೀಡಲಾಯಿತಾದರೂ ಅಗ್ನಿಶಾಮಕ ವಾಹನಕ್ಕೆ ಚಾಲಕರು ಇಲ್ಲ ಎಂಬ ಕಾರಣಕ್ಕೆ ಹುಣಸೂರಿನಿಂದ ಅಗ್ನಿಶಾಮಕ ದಳದ ವಾಹನ ಆಗಮಿಸಿತು. ಅಷ್ಟರಲ್ಲಾಗಲೆ ಕಬ್ಬು ಬೆಂಕಿಯಿಂದ ನಾಶವಾಗಿತ್ತು. ಎಚ್.ಡಿ. ಕೋಟೆಯಲ್ಲಿ ಅಗ್ನಿಶಾಮಕ ಠಾಣೆ ಇದ್ದೂ ಪ್ರಯೋಜನಕ್ಕೆ ಬಾರದಂತಾಯಿತು.
ಕಾರು ಡಿಕ್ಕಿ; ಬೈಕ್ ಸವಾರಗೆ ಪೆಟ್ಟು
ತಾಂಡವಪುರ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಗ್ರಾಮದ ಹಳ್ಳಿದಿಡ್ಡಿ ವೃತ್ತದಲ್ಲಿ ಜರುಗಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯ ಸೋಮಪ್ಪ ಅವರ ಪುತ್ರ ಮೂರ್ತಿ(25) ಗಾಯಗೊಂಡ ವ್ಯಕ್ತಿ. ಗಾಯಾಳುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕ್ಯಾನ್ಸರ್ ತಪಾಸಣೆ ಶಿಬಿರ
ವಾಣಿವಿಲಾಸ ರಸ್ತೆಯಲ್ಲಿರುವ ಪ್ರೀತಿ ಕ್ಯಾನ್ಸರ್ ಸೆಂಟರ್ನಲ್ಲಿ ಫೆ.13ರಂದು ಕ್ಯಾನ್ಸರ್ ತಪಾಸಣೆ ಶಿಬಿರ ಏರ್ಪಡಿಸಿದ್ದು, ಒಂದು ತಿಂಗಳಿಗೂ ಮೇಲ್ಪಟ್ಟು ವಾಸಿಯಾಗದ ಗಾಯ, ರಕ್ತಸ್ರಾವ, ಊತ, ಗಡಸುತನ, ನುಂಗುವಾಗಿನ ತೊಂದರೆ, ಗಂಟಲಲ್ಲಿ ಉರಿತ ಅಥವಾ ತಡೆತ, ಧ್ವನಿ ಬದಲಾವಣೆ ಇರುವ ರೋಗಿಗಳು ಭಾಗವಹಿಸಬಹುದು. ದೂ. 4259259 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

