ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮಾಹಿತಿ ಕೊರತೆ
ಹುಣಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ 89 ಇಲಾಖೆಗಳಿಂದ ಸಾವಿರಾರು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತಂದರೂ, ಮಾಹಿತಿ ಕೊರತೆಯಿಂದ ಯೋಜನೆಗಳು ವಿಫಲವಾಗುತ್ತಿವೆ ಎಂದು ಜಿಪಂ ಸಿಇಒ ಪಿ.ಎ.ಗೋಪಾಲ್ ವಿಷಾದಿಸಿದರು.
ತಾಲೂಕಿನ ಗದ್ದಿಗೆ ಕೆಂಡಗಣ್ಣೇಶ್ವರಸ್ವಾಮಿ ಶ್ರೀ ಕ್ಷೇತ್ರದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸೌಲಭ್ಯ ಮತ್ತು ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮತ್ತು ಮಾಹಿತಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೊಸದಾಗಿ ಅಧಿಕಾರಕ್ಕೆ ಬಂದ ಪಕ್ಷಗಳು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಾರೆ. ನಂತರ ಸರ್ಕಾರದ ಅವಧಿ ಮುಗಿದ ಬಳಿಕ ಯೋಜನೆಗಳು ನೆನೆಗುದಿಗೆ ಬೀಳುತ್ತವೆ. ಮಾಹಿತಿ ಕೊರತೆಯಿಂದ ಇಂಥ ಯೋಜನೆಗಳು ಜನರಿಗೆ ಎಷ್ಟರ ಮಟ್ಟಿಗೆ ತಲುಪುತ್ತವೆ ಎಂಬುದು ಪ್ರಶ್ನೆಯಾಗಿದೆ. ಕೇಂದ್ರ ಸರ್ಕಾರ ಮಾಹಿತಿ ಹಕ್ಕು ಯೋಜನೆಯಡಿ ಸಾಮಾನ್ಯ ವ್ಯಕ್ತಿ ಕೇಳುವ ಪ್ರಶ್ನೆಗೂ ಸರ್ಕಾರದ ಯೋಜನೆ ಮತ್ತು ಸವಲತ್ತುಗಳ ಉಪಯೋಗದ ಬಗ್ಗೆ ಉತ್ತರಿಸಬೇಕಿದೆ ಎಂದರು.
ಜಿಪಂ ಅಧ್ಯಕ್ಷ ಮಹದೇವ್, ಜಿಪಂ ಸದಸ್ಯೆ ಡಾ. ಪುಷ್ಪಾವತಿ ಅಮರನಾಥ್, ಜಿಪಂ ಸದಸ್ಯ ಬಿಳಿಕೆರೆ ಮಂಜು ಮಾತನಾಡಿದರು. ಕೃಷಿ ವಿಜ್ಞಾನಿಗಳಾದ ಡಾ. ಹೊಂಬಯ್ಯ, ಡಾ. ಚಿಕ್ಕಪಾಪಣ್ಣ, ಡಾ. ಸದಾಶಿವಮೂರ್ತಿ, ವಸಂತಕುಮಾರ್ ತಿಮಕಾಪುರ ಅವರು ತಾಂತ್ರಿಕ ಹಾಗೂ ಹೊಸ ತಳಿಗಳ ಅವಿಷ್ಕಾರದ ಬಗ್ಗೆ ರೈತರಿಗೆ ತಿಳಿಸಿಕೊಟ್ಟರು.
ಮೀನುಗಾರಿಕೆ, ಜಲಾಯನ ಮತ್ತು ಕೃಷಿ ತೋಟಗಾರಿಕೆ ಮತ್ತು ಪಶುಸಂಗೋಪನೆ, ರೇಷ್ಮೆ, ಸಾಮಾಜಿಕ ಅರಣ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳಲ್ಲಿ ಸೌಲಭ್ಯ ಮತ್ತು ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಚಿಕ್ಕಣ್ಣ, ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯ್ಕ, ತಾಪಂ ಸದಸ್ಯರಾದ ರಂಗಸ್ವಾಮಿ, ಪರಮೇಶ್ವರಿ, ಪ್ರಸನ್ನಕುಮಾರ್, ಗ್ರಾಪಂ ಅಧ್ಯಕ್ಷೆ ಸುನಂದಮ್ಮ, ತಾಪಂ ಇಒ ಡಾ. ಪ್ರೇಮಕುಮಾರ್, ತೋಟಗಾರಿಕೆ ಸಹಾಯಕ ನಿರ್ದೇಶಕ ಸೋಮಯ್ಯ, ಕಾಂಗ್ರೆಸ್ ಮುಖಂಡ ಜಿ. ದೇವರಾಜು, ಆತ್ಮಯೋಜನೆ ಉಪನಿರ್ದೇಶಕ ಸತೀಶ್ಕುಮಾರ್, ಸಹಾಯಕ ನಿರ್ದೇಶಕ ವೆಂಕಟೇಶ್, ಕೃಷಿ ಸಹಾಯಕ ಅಧಿಕಾರಿ ಗೋವಿಂದರಾಜು, ಕೃಷಿ ವಿಜ್ಞಾನಿ ವಸಂತಕುಮಾರ್, ಡಾ. ಹೊಂಬಯ್ಯ, ಚಿಕ್ಕಪಾಪಣ್ಣ, ಸದಾಶಿವಮೂರ್ತಿ, ಜವಳಿ ಇಲಾಖೆ ಉಪ ನಿರ್ದೇಶಕ ಜನಾರ್ಧನ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಜಿ.ಎಚ್.ಮಂಜುನಾಥ್ ಇದ್ದರು. ಮಂಜುನಾಥ್ ನಿರೂಪಿಸಿದರು. ಡಾ. ಪ್ರೇಮಕುಮಾರ್ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

