ಮಹೇಶ್ ನಂಜಯ್ಯಗೆ ಪ್ರಶಸ್ತಿ
ಮೈಸೂರು: ಇತ್ತೀಚೆಗೆ ರಾಜ್ಯ ಸರ್ಕಾರ ಏರ್ಪಡಿಸಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಮಕ್ಕಳ ಚಿತ್ರ ಕಂಸಾಳೆ ಕೈಸಾಳೆ ನಾಟಕದ ನಿರ್ಮಾಪಕರಾದ ಮಹೇಶ್ ನಂಜಯ್ಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಸಾವಿರ ನಗದು ಬಹುಮಾನ ನೀಡಿ ಸನ್ಮಾನಿಸಿದರು.
ಇವರೊಟ್ಟಿಗೆ ಸಹ ನಿರ್ಮಾಪಕರಾದ ನಾಗಿಣಿ ಭರಣ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರಿಗೂ ಪ್ರಶಸ್ತಿ ಪ್ರದಾನ ಮಾಡಿ, ಸನ್ಮಾನಿಸಲಾಯಿತು.
ಶಾಸಕ ವೀರಣ್ಣ ಮತ್ತಿಕಟ್ಟಿ, ಸಚಿವರಾದ ಎಚ್.ಕೆ. ಪಾಟೀಲ್, ರೋಷನ್ ಬೇಗ್, ಉಮಾಶ್ರೀ, ದಿನೇಶ್ ಗುಂಡೂರಾವ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್. ಗಂಗಾಧರ್ ಇದ್ದರು.
ಭೀಮನಕೊಲ್ಲಿಯಲ್ಲಿ ವೈವಭದ ರಥೋತ್ಸವ
ಸರಗೂರು: ಎಚ್.ಡಿ. ಕೋಟೆ ತಾಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೇವಸ್ಥಾನದ ಸುತ್ತ ಭಕ್ತರು ಭಕ್ತಿಭಾವದಿಂದ ರಥ ಎಳೆದು ಪುನೀತರಾದರು. ಮಹಿಳೆಯರು ಉರುಳು ಸೇವೆ ಮಾಡಿ ಹರಕೆ ತೀರಿಸಿದರು. ರಥೋತ್ಸವದಲ್ಲಿ ವೀರಗಾಸೆ ಕುಣಿತ, ಮಂಗಳವಾದ್ಯ, ಜಾನಪದ ಕಲಾ ತಂಡಗಳ ಗಮನ ಸೆಳೆದವು. ಇದಕ್ಕೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ ಮುಂಜಾನೆ ಬಿಲ್ವಾರ್ಚನೆ, ಪ್ರಸಾದ ವಿನಿಯೋಗ, ದೇವಸ್ಥಾನದ ಮುಂದೆ ಕೊಂಡೋತ್ಸವ, ಮಹದೇಶ್ವರ ಸ್ವಾಮಿ ರಥೋತ್ಸವ ಮತ್ತು ಆನೆ ವಾಹನೋತ್ಸವ ನಡೆಯಿತು. ಎಚ್.ಡಿ. ಕೋಟೆ ಸುಧ ಅವರಿಂದ ಭರತನಾಟ್ಯ, ಇನಗನಿ ಮಣ್ಣಮಕ್ಕಳ ಒನ್ನ ಪದಗಳ ಬಳಗ ಡಾ.ಕೆ. ರಾಮೇಶ್ವರಪ್ಪ ಅವರಿಂದ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮ ನಾಗರಾಜು ವೃಂದದಿಂದ ಶಿವಕಥೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

