ಸಾಲ ಮಂಜೂರಾತಿಗೆ ನಿಬಂಧನೆ ಸಡಿಲಿಕೆಗೆ ಆಗ್ರಹ
ಮೈಸೂರು: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಫಾಯಿ ಕರ್ಮಚಾರಿ ಯೋಜನೆಯಡಿ ಸಾಲ ಮಂಜೂರಾತಿಗೆ ಕೆಲವು ನಿಬಂಧನೆಗಳನ್ನು ಸಡಿಲಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಎಂ.ವಿ. ವೆಂಕಟೇಶ್ ಆಗ್ರಹಿಸಿದರು.
ಸಫಾಯಿ ಕರ್ಮಚಾರಿ ನೇರ ಸಾಲ ಯೋಜನೆಯಡಿಯಲ್ಲಿ ವಿವಿಧ ಉದ್ದೇಶಕ್ಕಾಗಿ ಸಾಲ ಮಂಜೂರಾತಿಯಾಗಿ ಹಣ ಬಿಡುಗಡೆಯಾಗಿದೆ. ಆದರೆ, ಹಣ ಮಂಜೂರಾತಿಗಾಗಿ ಫಲಾನುಭವಿಗಳಿಗೆ ಕೆಲವು ನಿಬಂಧನೆ ವಿಧಿಸಲಾಗಿದೆ.
ಚೆಕ್ ನೀಡುವುದು, ಸರ್ಕಾರ ನೀಡುವ ಧನ ಸಹಾಯವನ್ನು ಬ್ಯಾಂಕಿನಲ್ಲಿ ಇರಿಸುವುದು, ಅಂಗಡಿ ಪರವಾನಗಿ, ಸಾಲ ಮಂಜೂರಾದ ಹಣವನ್ನು ಎರಡು ಕಂತಿನಲ್ಲಿ ನೀಡಲಾಗುತ್ತಿದೆ. ಈ ನಿರ್ಬಂಧಗಳನ್ನು ಸಡಿಲಗೊಳಿಸಿ, ಸಾಲ ಮಂಜೂರಾತಿ ಮಾಡಬೇಕು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕೇಂದ್ರ ಸರ್ಕಾರವು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಯೋಜನೆಯಡಿ ವಿವಿಧ ಉದ್ದೇಶಗಳಿಗೆ ಸಾಲ ಸೌಲಭ್ಯ ನೀಡಲು ಮುಂದಾಗಿದೆ. ಆದರೆ, ಕರ್ನಾಟಕ ಸರ್ಕಾರವು ಕಠಿಣ ನಿಂಬಂಧನೆಗಳನ್ನು ಆದೇಶ ಮಾಡಿ, ಸೌಲಭ್ಯಗಳನ್ನು ವಂಚಿಸುತ್ತಿದೆ. ಹೀಗಾಗಿ ನಿಬಂಧನೆಗಳನ್ನು ಸಡಿಲಿಸಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ನೀಡುವ ಸಲುವಾಗಿ ರಾಜ್ಯದಲ್ಲಿ ಸಮೀಕ್ಷೆ ನಡೆಸಿ 800 ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಇದರ ಮರು ಸಮೀಕ್ಷೆ ನಡೆಸಿ, ಎಲ್ಲರಿಗೂ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಸಫಾಯಿ ಕರ್ಮಚಾರಿ ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ಜಯರಾಮ್, ಉಪಾಧ್ಯಕ್ಷರಾದ ಎಚ್. ಧರ್ಮರಾಜ್, ಸಿ.ಆರ್. ರಾಚಯ್ಯ, ಜೆಡಿಎಸ್ ಮುಖಂಡ ಆರ್ಟಿಸ್ಟ್ ನಾಗರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

