ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ: ಐಜಿಪಿ
ಮೈಸೂರು: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (ಕೆಎಸ್ಐಎಸ್ಎಫ್) ಮೊದಲ ಮಹಿಳಾ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿಯು ಬುಧವಾರದಿಂದ ಆರಂಭವಾಯಿತು.
ಮೈಸೂರಿನ ಜ್ಯೋತಿನಗರದ ಡಿಎಆರ್ ಪೊಲೀಸ್ ತರಬೇತಿ ಶಾಲೆಯಲ್ಲಿ ಈ ಬುನಾದಿ ತರಬೇತಿಯನ್ನು ದಕ್ಷಿಣ ವಲಯದ ಐಜಿಪಿ ಡಾ.ಕೆ. ರಾಮಚಂದ್ರರಾವ್ ಉದ್ಘಾಟಿಸಿದರು.
ನಂತರ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳು ಕೈಗಾರಿಕೆಗಳಿಗೆ ಭದ್ರತೆ ನೀಡುವ ಉದ್ದೇಶದಿಂದ ಕೆಎಸ್ಐಎಸ್ಎಫ್ ಸ್ಥಾಪಿಸಲಾಗಿದೆ. ಇಲ್ಲಿ ಹೊರಾಂಗಣ ಮತ್ತು ಒಳಾಂಗಣ ತರಬೇತಿ ಪಡೆದು ಕೈಗಾರಿಕೆಗಳ ರಕ್ಷಣೆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಕೆಎಸ್ಐಎಸ್ಎಫ್ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾಗಿರುವ 163 ಮಹಿಳಾ ಪ್ರಶಿಕ್ಷಣಾರ್ಥಿಗಳಿಗೆ ಮೈಸೂರಿನ ಪೊಲೀಸ್ ತರಬೇತಿ ಶಾಲೆಯಲ್ಲಿ ಬುನಾದಿ ತರಬೇತಿ ನೀಡಲಾಗುತ್ತದೆ. ಈ ಪ್ರಶಿಕ್ಷಣಾರ್ಥಿಕಗಳಿಗೆ 6 ತಿಂಗಳು ಮೈಸೂರಿನಲ್ಲಿ, ನಂತರ 3 ತಿಂಗಳು ಹೈದರಾಬಾದ್ನಲ್ಲಿರುವ ರಕ್ಷಾ ಅಕಾಡೆಮಿಯಲ್ಲಿ ತರಬೇತಿ ನೀಡಲಾಗುತ್ತದೆ.
ಎಸ್ಪಿ ಅಭಿನವ್ ಅಶೋಕ್ ಖರೆ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್ಪಿ ಹಾಗೂ ಪೊಲೀಸ್ ತರಬೇತಿ ಶಾಲೆಯ ಪ್ರಭಾರ ಪ್ರಾಂಶುಪಾಲ ಶ್ರೀಹರಿ ಬರಗೂರು, ಎಸಿಡಿಐ ಶಂಕರೇಗೌಡ ಸ್ವಾಗತಿಸಿದರು. ಸಿಡಿಐ ಎಚ್.ಪಿ. ಸತೀಶ್ ವಂದಿಸಿದರು. ಡಿಎಆರ್ನ ಎಂ. ಬಾಬು ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

