ರಸ್ತೆ ಅಭಿವೃದ್ಧಿಗೆ 20 ಲಕ್ಷ ಮಂಜೂರು
ಕೆ.ಆರ್. ನಗರ: ಚುಂಚನಕಟ್ಟೆ ಹೋಬಳಿಯ ಚಿಕ್ಕಕೊಪ್ಪಲು ಮತ್ತು ಮಳಲಿ ಗ್ರಾಮಗಳಲ್ಲಿ ನಾಯಕ ಸಮಾಜದ ಕಾಲೋನಿಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರದಿಂದ 20 ಲಕ್ಷ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
13ನೇ ಹಣಕಾಸು ಯೋಜನೆಯಡಿ 55 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಚುಂಚನಕಟ್ಟೆ- ಬೈಲಾಪುರ ಗ್ರಾಮದ ಸಂಪರ್ಕ ರಸ್ತೆಗೆ ಚುಂಚನಕಟ್ಟೆ ಬಸವನ ವೃತ್ತದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಜತೆಗೆ ಹೋಬಳಿಯಲ್ಲಿರುವ ಇತರ ಸಮಾಜದ ಕಾಲೋನಿಗಳ ಸಮಗ್ರ ಅಭಿವೃದ್ಧಿಗೂ ಗಮನ ಹರಿಸುವ ಭರವಸೆ ನೀಡಿದರು.
ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿರುವ ದಲಿತ ಸಮುದಾಯದವರ ಬೇಡಿಕೆ ಮೇರೆಗೆ ಕಾಲೋನಿ ರಸ್ತೆಯನ್ನು ಕಾಂಕ್ರಿಟ್ ಮಾಡಿ ಚರಂಡಿಗಳನ್ನು ನಿರ್ಮಿಸಲು 15 ಲಕ್ಷ ಮತ್ತು ಸಾಲಿಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಪ್ರಯೋಗಾಲಯದ ಕಟ್ಟಡ ನಿರ್ಮಾಣ ಕಾಮಗಾರಿಗೆ 30 ಲಕ್ಷ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಮಾಜಿ ಸದಸ್ಯ ಎಚ್.ಟಿ. ಲೋಕೇಶ್, ಕುಪ್ಪೆ ಗ್ರಾಪಂ ಅಧ್ಯಕ್ಷ ಮಂಜುನಾಥ್, ಸದಸ್ಯ ಬಾಬು, ಮಾಜಿ ಸದಸ್ಯ ಸಿ.ಜಿ. ಮಧು, ಎಚ್.ಆರ್. ಮಧುಚಂದ್ರ, ಎಚ್.ಆರ್. ದಿನೇಶ್, ಡಿ.ಆರ್. ರಮೇಶ್, ಹರೀಶ್, ಉಮೇಶ್, ಸರ್ಕಲ್ ಇನ್ಸ್ಪೆಕ್ಟರ್ ಸಿದ್ದಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

