ವಿದ್ಯಾರ್ಥಿಗಳಿಗೆ ಮಲಾಲಾ ಸ್ಫೂರ್ತಿಯಾಗಲಿ: ಪಂಚಾಕ್ಷರ
ಮೈಸೂರು: ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲ ಸ್ಫೂರ್ತಿಯಾಗಬೇಕು ಎಂದು ಮರಿಮಲ್ಲಪ್ಪನವರ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಎನ್. ಪಂಚಾಕ್ಷರಸ್ವಾಮಿ ಹೇಳಿದರು.
ಮರಿಮಲ್ಲಪ್ಪನವರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಚೇತನ- 14 ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ವಾರ್ಷಿಕ ಸಂಚಿಕೆಗಳು ಆಯಾ ಸಂಸ್ಥೆಯ ಇತಿಹಾಸವನ್ನು ತಿಳಿಸಿಕೊಡುತ್ತವೆ. ಇಂಥ ಸಂಚಿಕೆಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಾಧಕರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಮಲಾಲ ಅವರಂಥವರ ವಿಷಯಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.
ಭಾರತರತ್ನ ಪ್ರಶಸ್ತಿ ವಿಜೇತರಾದ ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್, ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್, ದ.ಆಫ್ರಿಕಾ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ, ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಬಗ್ಗೆ ವಾರ್ಷಿಕ ಸಂಚಿಕೆಯಲ್ಲಿ ಲೇಖನಗಳಿರುವುದಕ್ಕೆ ಅವರು ಪರೋಕ್ಷವಾಗಿ ಮೆಚ್ಚುಗೆ ಸೂಚಿಸಿದರು.
ಮಹಾನಂದಿಕೇಶ್ವರ ಕಮರ್ಷಿಯಲ್ ಪ್ರಿಂಟ್ಸ್ ಮಾಲೀಕ ಜ್ಞಾನಶಂಕರ್ ಮುಖ್ಯ ಅತಿಥಿಯಾಗಿದ್ದರು. ಕನ್ನಡಪ್ರಭ ಹಿರಿಯ ವಿಶೇಷ ವರದಿಗಾರ ಅಂಶಿ ಪ್ರಸನ್ನಕುಮಾರ್ ಚೇತನ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿದರು. ಪ್ರಾಂಶುಪಾಲ ಎಂ.ಈ. ಶಂಕರಪ್ಪ, ಶೈಕ್ಷಣಿಕ ಅಧಿಕಾರಿ ಮಲ್ಲುಸ್ವಾಮಿ ಇದ್ದರು. ಉಪ ಪ್ಪಾಂಶುಪಾಲ ಡಾ.ಪರ್ವತರಾಜು ಸ್ವಾಗತಿಸಿದರು. ಸಂಚಿಕೆ ಸಂಪಾದಕ ಡಾ. ವಿಶ್ವನಾಥ ಐನಹಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಉಮಾ ಪ್ರಶಾಂತ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

