ಬಜೆಟ್: ವಿಶೇಷ ಮಕ್ಕಳಿಗೆ ಹೆಚ್ಚು ಹಣ
ಮೈಸೂರು: 2014-15ನೇ ರಾಜ್ಯ ಮುಂಗಡ ಪತ್ರದಲ್ಲಿ ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆಗಳಿಗೆ ಗರಿಷ್ಠ ಮೊತ್ತವನ್ನು ಮೀಸಲಿಡಬೇಕೆಂದು ಒತ್ತಾಯಿಸಿ, ರಾಜ್ಯ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರ ಸಂಘದ ಪದಾಧಿಕಾರಿಗಳು ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ವಿಶೇಷ ಶಾಲೆಗಳನ್ನು ನಡೆಸುತ್ತಿರುವ ಸುಮಾರು 120ರಿಂದ 130 ಶಾಲೆಗಳು ರಾಜ್ಯ ಸರ್ಕಾರದಿಂದ ಪೂರ್ಣ ಪ್ರಮಾಣ ಅನುದಾನವನ್ನು ಪಡೆಯದೆ ಸಂಕಷ್ಟದಲ್ಲಿದೆ. 1982 ಅನುದಾನ ನೀತಿ ಸಂಹಿತೆಯಲ್ಲಿ ರಾಜ್ಯದ ಕೇವಲ 8 ಶಾಲೆಗಳು ಮಾತ್ರ ಅನುದಾನ ಪಡೆಯುತ್ತಿದೆ.
2010ರಲ್ಲಿ ರಾಜ್ಯ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಾರಿಗೆ ತಂದಿರುವ ಶಿಶುಕೇಂದ್ರೀಕೃತ ಶಿಕ್ಷಣ ನೀತಿ ಸಂಪೂರ್ಣ ಅವೈಜ್ಞಾನಿಕವೆನಿಸಿದ್ದು, ಸಂಸ್ಥೆಯಲ್ಲಿರುವ ಮಕ್ಕಳ ಎಣಿಕೆಗೆ ಅನುಗುಣವಾಗಿ ಪ್ರತಿ ತಿಂಗಳಿಗೆ 2000 ಹಾಗೂ 2,500 ಕ್ರಮವಾಗಿ ವಸತಿ ಸಹಿತ ಹಾಗೂ ವಸತಿ ರಹಿತರಿಗೆ ಕೇವಲ ಹತ್ತು ತಿಂಗಳ ಅವಧಿಗೆ ಮಾತ್ರ ನೀಡುತ್ತಿದ್ದು, ಇಲ್ಲಿ ವಿಶೇಷ ಶಿಕ್ಷಕರಿಗೆ ಕೇವಲ 6 ಸಾವಿರ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಕೇವಲ 3,750 ಗೌರವಧನ ನೀಡಲು ಆದೇಶವಿದೆ.
ಬುದ್ಧಿಮಾಂದ್ಯ ಮಕ್ಕಳನ್ನು ಸಾಮಾನ್ಯ ಶಾಲೆಯಲ್ಲಿರಿಸಿ ಶಿಕ್ಷಣ ನೀಡುವುದು ಕಷ್ಟಸಾಧ್ಯ. ಈ ಮಕ್ಕಳಿಗೆ ವಿಶೇಷ ಶಾಲೆಗಳಲ್ಲಿ ವೈಯುಕ್ತಿಕ ಶಿಕ್ಷಣ ಯೋಜನೆಯಡಿಯಲ್ಲಿ ಶಿಕ್ಷಣ ನೀಡಬೇಕಾದ ಅಗತ್ಯವಿದೆ. ಈ ಯೋಜನೆನ್ವಯ ವಿಶೇಷ ಶಾಲೆಗಳು ಕಾರ್ಯವೆಸಗಬೇಕಾದರೆ ಸರ್ಕಾರದಿಂದ ಪೂರ್ಣ ಪ್ರಮಾಣದ ಅನುದಾನ ದೊರಕಬೇಕಾಗಿದೆ.
ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಯಿತು. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ಕುಮಾರ್ ಶೆಟ್ಟಿ, ಸಹ ಕಾರ್ಯದರ್ಶಿ ಕೆ.ಬಿ. ಉಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

