'ರಾಮದಾಸ್ ಆತ್ಮಹತ್ಯೆ ಪ್ರಕರಣ ಪಕ್ಷಕ್ಕೆ ಮುಜುಗರ ತಂದಿದೆ'
ಮೈಸೂರು: ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆತ್ಮಹತ್ಯೆ ಯತ್ನ ಪ್ರಕರಣವು ಪಕ್ಷಕ್ಕೆ ಮುಜುಗರ ತಂದಿರುವುದು ನಿಜ. ಆದರೆ, ಇದು ಲೋಕಸಭಾ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು. ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮದಾಸ್ ಅವರನ್ನು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಮದಾಸ್ ಅವರ ಆರೋಗ್ಯ ಸುಧಾರಣೆ ಆಗಿದೆ. ಅವರನ್ನು ನೋಡಿ ಬಂದಿದ್ದೇನೆ. ಮಾತನಾಡಿಸಿಲ್ಲ. ಈ ಪ್ರಕರಣವು ಸೂಕ್ಷ್ಮ ವಿಚಾರವಾಗಿದ್ದು, ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಸಂಬಂಧಪಟ್ಟ ಮಹಿಳೆಯು ತಮ್ಮ ಬಳಿಯಿರುವ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ತನಿಖೆಯ ನಂತರವೇ ಸತ್ಯ ಹೊರಬರಬೇಕಿದೆ. ಈ ಸಂಬಂಧ ಈಗಲೇ ಅಭಿಪ್ರಾಯ ಹೇಳುವುದು ಸರಿಯಲ್ಲ ಎಂದರು. ಈ ವಿಚಾರವನ್ನು ಸಮರ್ಥಿಸಿಕೊಳ್ಳುವುದಿಲ್ಲ ಅಥವಾ ಅಲ್ಲಗಳೆಯುವುದಿಲ್ಲ. ಆದರೆ, ಈ ಬಗ್ಗೆ ತನಿಖೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಇಂಥ ಪ್ರಕರಣಗಳು ಸರ್ಕಾರಿ ಅಧಿಕಾರಿಗಳ ಮೇಲೆ ಆಗುತ್ತಲೇ ಇದೆ. ರಾಜಕಾರಣಿಗಳನ್ನಂತೂ ಟಾರ್ಗೆಟ್ ಮಾಡಲಾಗುತ್ತಿದೆ. ರಾಮದಾಸ್ ಅವರ ಪ್ರಕರಣದ ಹಿಂದೆ ರಾಜಕೀಯ ಹುನ್ನಾರವಿದೆ. ವೈಯಕ್ತಿಕವಾಗಿ ರಾಮದಾಸ್ ಅವರ ಚಾರಿತ್ರ್ಯವಧೆ ಮಾಡಲು ಕಾಣದ ಕೈಗಳು ಪ್ರಯತ್ನ ನಡೆಸುತ್ತಿವೆ. ಈ ಸಂಬಂಧ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದರು. ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಹೇಮಂತ್‌ಕುಮಾರ್‌ಗೌಡ, ಎಂಡಿಎ ಮಾಜಿ ಅಧ್ಯಕ್ಷ ನಾಗೇಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

