'ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಸಹಕಾರಿ'
ಸಾಲಿಗ್ರಾಮ: ಗ್ರಾಮೀಣ ಪ್ರದೇಶದಲ್ಲಿ ಸಂಘಟನೆಗಳ ಮೂಲಕ ಮಹಿಳೆಯರು ಜಾಗೃತರಾಗಿ, ಸ್ವಾವಲಂಬಿ ಬದುಕನ್ನು ನಡೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ತಾಪಂ ಸದಸ್ಯ ರವಿ ಹೇಳಿದರು.
ಪಟ್ಟಣದ ಚುಂಚನಕಟ್ಟೆ ರಸ್ತೆಯಲ್ಲಿರುವ ಅಟ್ಟಣ್ಣ ಕಾಂಪ್ಲೆಕ್ಸ್ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವಂಥ ಜನರಿಗೆ ಸಂಘಟನೆಗಳ ಮೂಲಕ ಧರ್ಮಸ್ಥಳ ಸಂಸ್ಥೆಯು ಬ್ಯಾಂಕ್ಗಳ ಸಹಯೋಗದೊಂದಿಗೆ ಸಾಲ ನೀಡುವ ಮೂಲಕ ಆಸರೆಯಾಗಿದ್ದು, ಜೊತೆಗೆ ಪ್ರತಿ ವಾರವು ಸಂಘಗಳ ಮೂಲಕ ಒಕ್ಕೂಟದ ಸಭೆ ನಡೆಸಿ ಕುಟುಂಬದ ನಿರ್ವಹಣೆ, ಜೀವನದಲ್ಲಿ ಶಿಸ್ತು, ಸಮಯಪಾಲನೆ ಜತೆಗೆ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡುವಂಥ ಮಹತ್ತರ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಮಹಿಳೆಯರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಬದುಕನ್ನು ಆರ್ಥಿಕವಾಗಿ ಸದೃಢಗೊಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಗ್ರಾಪಂ ಮಾಜಿ ಉಪಾಧ್ಯಕ್ಷೆ ಶಶಿಕಲಾ ನಾರಾಯಣ್ ಮಾತನಾಡಿದರು. ತಂದ್ರೆ ಗ್ರಾಪಂ ಸದಸ್ಯ ಅಯ್ಯಣ್ಣ, ಸಾಲಿಗ್ರಾಮ ವಲಯ ಮೇಲ್ವಿಚಾರಕ ನಿರಂಜನ್, ಸ್ಪೀಡ್ ಕಂಪ್ಯೂಟರ್ ವ್ಯವಸ್ಥಾಪಕಿ ಸುಮತಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಗೀತಾ, ವೀಣಾರಾಜಣ್ಣ, ಸೇವಾ ಪ್ರತಿನಿಧಿಗಳಾದ ನಾಗಮಣಿ ಮಹೇಶ್, ಕರ್ಪೂರವಳ್ಳಿ ಪದ್ಮ, ಎಸ್.ಆರ್.ಮಂಜುಳಾ ರಮೇಶ್, ದೊಡ್ಡಕೊಪ್ಪಲು ಬಸವರಾಜು, ದಿನೇಶ್, ಮಾವನೂರು ಲಲಿತಾಮಣಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

