ಮೈಸೂರು

ನಾಲೆ ಆಧುನೀಕರಣಕ್ಕೆ 450 ಕೋಟಿ ಬಿಡುಗಡೆ

Published On :

ಟಿ. ನರಸೀಪುರ: ಇಲ್ಲಿನ ರಸ್ತೆಗಳ ಅಭಿವೃದ್ಧಿ ಹಾಗೂ ನಾಲೆಗಳ ಆಧುನಿಕರಣಕ್ಕೆ ಸುಮಾರು 450 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ತಾಲೂಕಿನ ಬೀಡನಹಳ್ಳಿಯಲ್ಲಿ ಗುರುವಾರ ಕಾವೇರಿ ನೀರಾವರಿ ನಿಗಮದ ವಿಶೇಷ ಘಟಕ ಯೋಜನೆ ಅನುದಾನದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ 80 ಕೋಟಿ ವೆಚ್ಚದಲ್ಲಿ ರಾಮಸ್ವಾಮಿ ನಾಲೆ ಆಧುನಿಕರಣ ಸೇರಿದಂತೆ ತಾಲೂಕಿನ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಸಿಡಿಎಸ್, ವಿರಿಜಾ ನಾಲೆ ಹಾಗೂ ಮಹದೇವಮಂತ್ರಿ ನಾಲೆಯ ಕುಕ್ಕೂರು ಶಾಖೆಯನ್ನು ಆಧುನೀಕರಣಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ. ನಾಳೆಯಿಂದಲೆ ರಾಮಸ್ವಾಮಿ ನಾಲೆ ಆಧುನಿಕರಣ ಕಾಮಗಾರಿ ಆರಂಭಿಸುವುದಾಗಿ ಅವರು ತಿಳಿಸಿದರು.
ತಾಪಂ ಅಧ್ಯಕ್ಷ ನಟರಾಜು, ಮಾಜಿ ಅಧ್ಯಕ್ಷೆ ಗಾಯಿತ್ರಿ ಸ್ವಾಮಿಗೌಡ, ಮಾಜಿ ಶಾಸಕ ಎಸ್. ಕೃಷ್ಣಪ್ಪ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ. ವಜ್ರೇಗೌಡ, ಎಸ್‌ಇ ಸತ್ಯನಾರಾಯಣ, ಇಇ ಕೃಷ್ಣಮೂರ್ತಿ, ಕಾವೇರಿ ನೀರಾವರಿ ನಿಗಮದ ಇಇ ವಿನೋದ್ ಕುಮಾರ್, ಎಇಇ ನಾಗಯ್ಯ, ಎಇ ಮಧುಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಚನ್ನಕೇಶವ, ಬಿ.ಎಂ. ಮಹದೇವ, ಸಹಕಾರಿ ಯೂನಿಯನ್ ಮಾಜಿ ಉಪಾಧ್ಯಕ್ಷ ಸಿದ್ದೇಗೌಡ, ಕಾಂಗ್ರೆಸ್ ಪ.ಜಾತಿ ಘಟಕದ ಜಿಲ್ಲಾಧ್ಯಕ್ಷ ಹೊನ್ನನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.