ಶಾಲಾ ಶೌಚಾಲಯ ಸ್ವಚ್ಛವಾಗಿರಲಿ: ಬಿಇಒ
ಭೇರ್ಯ: ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಜವರೇಗೌಡ ಭೇಟಿ ನೀಡಿ ಶೌಚಾಲಯದ ದುಸ್ಥಿತಿ ಕಂಡು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ಒಂದೇ ಶೌಚಾಲಯವೂ ಗಿಡಗಂಟೆಗಳು ಬೆಳೆದು ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗುತ್ತಿದ್ದಾರೆ ಎಂದು ಕನ್ನಡಪ್ರಭದಲ್ಲಿ ವರದಿಯಾಗಿತ್ತು. ಈ ವರದಿಗೆ ಸ್ಪಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಪೋಲಿ ಪುಂಡರ ಹಾವಳಿ ತಡೆಗಟ್ಟಲು ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ದೂರು ನೀಡಲು ಮುಖ್ಯಶಿಕ್ಷಕರಿಗೆ ಸೂಚಿಸಿದರು. ಎಸ್‌ಡಿಎಂಸಿ ಸಭೆಯಲ್ಲಿ ಶಾಲೆಯ ಈ ವಿಷಯವನ್ನು ಚರ್ಚಿಸಿ ಪೋಷಕರಿಗೆ ತಿಳಿಸಿ ಅವರಿಂದ ಬಂದ ವರದಿಯನ್ನು ನನಗೆ ಕೊಡಿ ಎಂದು ತಿಳಿಸಿದರು. ನಂತರ ಶಾಲೆಯ ಪಕ್ಕದಲ್ಲೆ ಇರುವ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ, ಪೊಲೀಸರಿಗೆ ಶಾಲೆಯ ಸಮಸ್ಯೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ರಜಾ ದಿನಗಳಲ್ಲಿ ಮತ್ತು ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳಿಂದ ಶಾಲೆಯ ಒಳ್ಳೆಯ ಪರಿಸರವನ್ನು ಹಾಳು ಮಾಡುತ್ತಿದ್ದು, ಅಂಥವರನ್ನು ಕಂಡಾಗ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಗ್ರಾಪಂ ಪಿಡಿಒ ಅವರೊಂದಿಗೆ ಮಾತನಾಡಿ, ಶಾಲೆ ಮುಂಭಾಗದಲ್ಲಿ ಇರುವ ಕಸದ ರಾಶಿಗಳಿಂದ ದುರ್ವಾಸನೆ ಬರುತ್ತಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕಸದ ತೊಟ್ಟಿಗಳನ್ನು ತೆರವುಗೊಳಿಸಿ. ಜೊತೆಗೆ ಶಾಲಾವರಣದಲ್ಲಿರುವ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸುವಂತೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

