ಗೂಂಡಾಗಳ ಮನ ಪರಿವರ್ತನೆಗೆ ಯತ್ನಿಸಿ: ನ್ಯಾ. ಪದ್ಮರಾಜ್ ಸಲಹೆ
ಮೈಸೂರು: ಗೂಂಡಾಗಳ ಮನ ಪರಿವರ್ತಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನಿಸಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ. ಪದ್ಮರಾಜ್ ಸಲಹೆ ನೀಡಿದರು.
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಅಧಿಕಾರಿಗಳಿಗಾಗಿ ಶುಕ್ರವಾರ ಆಯೋಜಿಸಿದ್ದ ಗೂಂಡಾ ಕಾಯ್ದೆ ಕುರಿತ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಗೂಂಡಾ ಚಟುವಟಿಕೆಗಳಲ್ಲಿ ಯಾರು ತೊಡಗಿದ್ದಾರೆಂಬುದರ ಬಗ್ಗೆ ಪೊಲೀಸರಿಗೆ ಮಾಹಿತಿ ಇರುತ್ತದೆ. ಕೆಲವು ವ್ಯಕ್ತಿಗಳು ಹಿಂದೆ ಮಾಡಿರುವ ಅಪರಾಧಗಳ ಆಧಾರದ ಮೇಲೆ ಮುಂದೇನು ಮಾಡಬಹುದೆಂಬುದರ ಲೆಕ್ಕಾಚಾರವನ್ನು ಪೊಲೀಸರು ಮಾಡಿಕೊಳ್ಳಬೇಕು. ಅಂಥವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಕೆಲವರು ಮನ ಪರಿವರ್ತನೆಯಾಗಿ ಸಮಾಜದಲ್ಲಿ ಉತ್ತಮ ಜೀವನ ಸಾಗಿಸುತ್ತಿರುತ್ತಾರೆ. ಅಂಥವರಿಗೆ ಪೊಲೀಸರು ತೊಂದರೆ ಕೊಡಬಾರದು ಎಂದರು.
ಪೊಲೀಸರು ಅಪರಾಧವನ್ನು ವಿರೋಧಿಸಬೇಕು. ಅಪರಾಧ ಮಾಡುವ ವ್ಯಕ್ತಿಗಳನ್ನು ವಿರೋಧಿಸಬಾರದು. ಕಾನೂನಿನಲ್ಲಿ ಹೇಳಿರುವಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧವಷ್ಟೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದರು.
ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಮಾತನಾಡಿ, ಸಮಾಜದಲ್ಲಿ ಶೇ.99 ಜನ ಒಳ್ಳೆಯವರಿದ್ದಾರೆ. ಆದರೆ, ಶೇ.1 ಜನ ಮಾತ್ರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಶೇ.1 ಜನರು ಉಳಿದ ಜನರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಹೀಗಾಗಿ ಪೊಲೀಸರು ಕಾನೂನು ಪಾಲನೆ, ತನಿಖೆ ಜೊತೆಗೆ ಅಪರಾಧ ನಿಯಂತ್ರಣ ಮಾಡಬೇಕಿದೆ ಎಂದರು.
ನಗರದ ಎಸಿಪಿ, ಇನ್ಸ್ಪೆಕ್ಟರ್, ಎಸ್ಐ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಕೆಪಿಎ ನಿರ್ದೇಶಕ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಡಿಸಿಪಿಗಳಾದ ರಾಜಣ್ಣ, ಮಹದೇವಯ್ಯ ಇದ್ದರು. ಕೆಪಿಎ ಉಪ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸ್ವಾಗತಿಸಿದರು. ಹೈಕೋರ್ಟ್ ಸರ್ಕಾರಿ ವಕೀಲ ಇ.ಎಸ್. ಇಂದ್ರೇಶ್ ವಂದಿಸಿದರು. ಸಹಾಯಕ ನಿರ್ದೇಶಕ ಸಿ. ಮಲ್ಲಿಕ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

