ಆರೋಗ್ಯವಂತನಿಂದ ಅಭಿವೃದ್ಧಿ ಸಾಧ್ಯ
ಮೈಸೂರು: ಎಲ್ಲರೂ ಆರೋಗ್ಯವಂತರಾದಾಗ ಮಾತ್ರ ಸಮಾಜ ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಚಾಮರಾಜ ಕ್ಷೇತ್ರದ ಶಾಸಕ ವಾಸು ಹೇಳಿದರು.
ಜಿಲ್ಲಾಡಳಿತ, ಜಿಪಂ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರು ವೈದ್ಯಕೀಯ ಕಾಲೇಜಿನ ಹಳೆ ವಸ್ತು ಪ್ರದರ್ಶನ ಕಟ್ಟಡದಲ್ಲಿ ಜಿಲ್ಲಾ ಸರ್ಕಾರಿ ನೌಕರರಿಗೆ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ಬಹುಮುಖ್ಯವಾದುದು ದೇಹದ ಆರೋಗ್ಯ. ಆರೋಗ್ಯ ಇದ್ದರೆ ಎನ್ನನಾದರೂ ಸಾಧಿಸಬಹುದು. ಈ ದಿಸೆಯಲ್ಲಿ ಸರ್ಕಾರಿ ನೌಕರರು ಜನರಿಗೆ ಉತ್ತಮ ಸೇವೆ ಸಲ್ಲಿಸಬೇಕಾದರೆ ಅವರು ಸಹ ಆರೋಗ್ಯವಂತರಾಗಿರುವುದು ಸಹ ಬಹುಮುಖ್ಯ. ಆರೋಗ್ಯವಂತ ಸಮಾಜದಿಂದ ಮಾತ್ರ ಹೆಚ್ಚಿನ ಪ್ರಗತಿ ಸಾಧ್ಯವಾಗಲಿದೆ ಎಂದರು.
ಚಾಮರಾಜ ಕ್ಷೇತ್ರದ ವ್ಯಾಪ್ತಿಗೆ ಬಹುತೇಕ ಪಾರಂಪರಿಕ ಕಟ್ಟಡಗಳು ಸೇರಲಿವೆ. ಅವುಗಳಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಸಹ ಒಂದು. ಇಂತಹ ಕಟ್ಟಡದ ಆವರಣದಲ್ಲಿರುವ ಈ ಜಾಗವನ್ನು ಸೂಕ್ತವಾಗಿ ಬಳಸಿಕೊಂಡು ಇಲ್ಲಿನ ಕಟ್ಟಡಗಳನ್ನು ಉತ್ತಮವಾಗಿ ನಿರ್ವಹಿಸುವ ಕೆಲಸ ಆಗಬೇಕು. ಮೈಸೂರಿನ ಅಭಿವೃದ್ಧಿಗೆ ಈ ಸಾಲಿನ ಬಜೆಟ್ನಲ್ಲಿ ರು.100 ಕೋಟಿ ಅನುದಾನ ಘೋಷಿಸಲಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಇದೇ ವೇಳೆ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ಉದ್ಘಾಟಿಸಿದರು.
ಹುಣಸೂರು ಶಾಸಕ ಎಚ್.ಪಿ. ಮಂಜುನಾಥ್, ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ, ಎಂಡಿಎ ಆಯುಕ್ತ ಎಸ್. ಪಾಲಯ್ಯ, ಜಿ.ಪಂ. ಮಾಜಿ ಅಧ್ಯಕ್ಷ ಕೆ. ಮರೀಗೌಡ, ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ರಾಮು, ಗೌರವಾಧ್ಯಕ್ಷ ಕೆ.ಟಿ ಚಂದ್ರೇಗೌಡ, ರಾಜ್ಯ ಪರಿಷತ್ ಸದಸ್ಯೆ ಎಸ್.ವಿ. ವಿಜಯಶ್ರೀ, ಖಜಾಂಚಿ ಡಾ. ಚುಂಚಯ್ಯ. ಕಾರ್ಯದರ್ಶಿ ಡಾ. ಕೆ. ಶಂಕರೇಗೌಡ, ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು, ಜಂಟಿ ಕಾರ್ಯದರ್ಶಿಗಳಾದ ಎನ್.ಸಿ. ಉಮೇಶ್, ಜಿ. ಮಂಟೇಲಿಂಗಯ್ಯ ಹಾಗೂ ಡಿಎಚ್ಒ ಡಾ. ಎಚ್.ಟಿ ಪುಟ್ಟಸ್ವಾಮಿ, ಡಾ.ಬಿ.ಜಿ. ಸಾಗರ್ ಮತ್ತಿತರರು ಉಪಸ್ಥಿತರಿದ್ದರು.
ಕೆ.ಆರ್. ಆಸ್ಪತ್ರೆ, ಜಯದೇವ ಆಸ್ಪತ್ರೆ, ಆಯುರ್ವೇದ ಆಸ್ಪತ್ರೆ, ಅಪೊಲೋ ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ, ವಿಕ್ರಂ ಆಸ್ಪತ್ರೆ, ಬಸಪ್ಪ ಆಸ್ಪತ್ರೆ, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ, ಮಿಷನ್ ಆಸ್ಪತ್ರೆ ಮುಂತಾದ ಆಸ್ಪತ್ರೆಗಳ ವೈದ್ಯರು ಹಾಗೂ ಶುಶ್ರೂಷಕರು ಭಾಗವಹಿಸಿ ತಪಾಸಣೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

