ದುಡಿವ ವರ್ಗಕ್ಕೆ ಆಹಾರಕೊಟ್ಟ ಯುಪಿಎ: ಪ್ರಸಾದ್
ಹುಣಸೂರು: ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯಡಿ ದುಡಿಯುವ ವರ್ಗಗಳಿಗೆ ಹೊಟ್ಟೆ ತುಂಬಿಸಿಕೊಳ್ಳುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಹೇಳಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಉತ್ಪಾದನೆ ಮಟ್ಟ ಹೆಚ್ಚಾಗುತ್ತಿದ್ದರೂ ಸಂಸ್ಕರಣೆಯ ಸಾಮರ್ಥ್ಯವಿದ್ದರೂ ಕೆಳ ವರ್ಗದವರು ಹಸಿವಿನಿಂದ ಸಾಯುತ್ತಿರುವುದು ವಿಷಾದನೀಯ ಎಂದರು. ಸಂಸದ ಎಚ್.ವಿಶ್ವನಾಥ್, ಜಿಲ್ಲಾ ಆಹಾರ ಇಲಾಖೆ ಹಿರಿಯ ಉಪನಿರ್ದೇಶಕ ಡಾ.ಕಾ. ರಾಮೇಶ್ವರಪ್ಪ, ಜಿಪಂ ಸದಸ್ಯೆ ಡಾ.ಪುಷ್ಪಾವತಿ ಅಮರನಾಥ್, ಉಪ ವಿಭಾಗಾಧಿಕಾರಿ ಜಗದೀಶ್, ತಾಪಂ ಇಒ ಡಾ. ಪ್ರೇಮಕುಮಾರ್, ತಹಸೀಲ್ದಾರ್ ವೆಂಕಟಚಾಲಪ್ಪ ಇದ್ದರು.
ಶಕ್ತಿನಗರದಲ್ಲಿ ಸರ ಅಪಹರಣ
ಮೈಸೂರು: ವಾಯುವಿಹಾರ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಶಕ್ತಿನಗರ ನಿವಾಸಿ ಶಾರದಾ (55) ಎಂಬವರೇ 55 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡವರು. ಇವರು ವಾಯುವಿಹಾರ ಮುಗಿಸಿ ವಾಪಸ್ ಮನೆಗೆ ಬೆಳಗ್ಗೆ 8.30ಕ್ಕೆ ಹೋಗುತ್ತಿದ್ದರು. ಇವರು ಶಕ್ತಿನಗರದ ಅಧ್ಯಯನ ಶಾಲೆ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು 55 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿಕೊಂಡು ಹೋಗಿದ್ದಾರೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲುಬಾಯಿ ಲಸಿಕೆ: ಸದುಪಯೋಗಕ್ಕೆ ಸಲಹೆ
ಹುಣಸೂರು: ಜಾನುವಾರಿಗೆ ರೋಗ - ರುಜಿನ ಬರದಂತೆ ತಡೆಯಬೇಕು ಮತ್ತು ಪಶು ವೈದ್ಯರು ನೀಡುವ ಸಲಹೆಗಳನ್ನು ರೈತರು ಪಾಲಿಸಬೇಕು ಎಂದು ಜಿಪಂ ಸದಸ್ಯ ರಮೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಪಶುವೈದ್ಯ ಸಹಾಯಕ ನಿರ್ದೇಶಕರ ಕಚೇರಿ ಅವರಣದಲ್ಲಿ ಭಾನುವಾರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಲು ಬಾಯಿ ಜ್ವರದಿಂದ ಸಾಕಷ್ಟು ಜಾನುವಾರು ಮೃತಪಟ್ಟಿವೆ ಸಾರ್ವಜನಿಕರು ಮುಂಜಾಗ್ರತೆಯಿಂದ ಪಶು ವೈದ್ಯರ ಸಲಹೆಗಳನ್ನು ಪಡೆದಿದ್ದರೆ ಅನಾಹುತಗಳನ್ನು ತಪ್ಪಿಸಬಹುದಾಗಿತ್ತು, ಆದರೂ ಮುಂದಿನ ದಿನದಲ್ಲಿ ರೋಗಗಳು ಕಾಣಿಸಿಕೊಳ್ಳುವ ಮೊದಲೇ ಚಿಕಿತ್ಸೆ ಮತ್ತು ತಪಾಸಣೆ ನಡೆಸುವಂತೆ ಕಿವಿ ಮಾತು ಹೇಳಿದರು. ಪಶುವೈದ್ಯ ಸಹಾಯಕ ನಿರ್ದೇಶಕ ಡಾ. ನಾಗರಾಜು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

