ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಿ: ಸಾ.ರಾ. ಮಹೇಶ್
ಸಾಲಿಗ್ರಾಮ: ಶೈಕ್ಷಣಿಕ ಕ್ಷೇತ್ರದಲ್ಲಿ ದೊರಕುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಸಾ.ರಾ. ಮಹೇಶ್ ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 30 ಲಕ್ಷ ವೆಚ್ಚದಲ್ಲಿ ಎರಡು ಪ್ರಯೋಗಾಲಯ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪಡೆಯಬೇಕಾದರೆ ಪಟ್ಟಣ ಪ್ರದೇಶಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದರು.
ನಮ್ಮ ತಾಲೂಕಿನಲ್ಲಿ ಉನ್ನತ ಶಿಕ್ಷಣ ಸೌಲಭ್ಯ ಇಲ್ಲದಂತಾಗಿದೆ. ಕ್ಷೇತ್ರದಲ್ಲಿ ವಿವಿಧ ವಿಷಯಗಳ ಪದವಿ ತರಗತಿಗಳು, ಡಿಪ್ಲೊಮಾ, ಐಟಿಐ ತರಗತಿಗಳು ಈಗಾಗಲೇ ಇದ್ದು ಮುಂದಿನ ದಿನಗಳಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ತಾಲೂಕಿನಲ್ಲಿ ಪ್ರಾರಂಭಿಸಲು ಶ್ರಮಿಸಲಾಗುವುದು ಎಂದರು.
ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಟಿ. ಜವರೇಗೌಡ, ತಾಪಂ ಮಾಜಿ ಸದಸ್ಯ ಎಸ್.ಎಂ. ಶ್ರೀನಿವಾಸಗೌಡ, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎ.ಟಿ. ಸೋಮಶೇಖರ್, ಎಪಿಎಂಸಿ ನಿರ್ದೇಶಕ ಕುಪ್ಪಳ್ಳಿ ಸೋಮಶೇಖರ್, ಗ್ರಾಪಂ ಅಧ್ಯಕ್ಷೆ ರಾಣಿ ರಾಜಣ್ಣ, ಉಪಾಧ್ಯಕ್ಷ ನಟರಾಜ್, ಜೆಡಿಎಸ್ ಮುಖಂಡರಾದ ಮೆಡಿಕಲ್ ರಾಜಣ್ಣ, ಮುಶೀರ್ಅಹಮದ್, ಎಸ್.ಎಸ್. ಜವರೇಗೌಡ, ಸಾ.ರಾ. ಗುರುಪ್ರಸಾದ್, ಎಸ್.ಟಿ. ರೇವಣ್ಣ, ಸಾ.ರಾ. ಸತೀಶ್, ಅರುಣ್ರಾಜ್, ಪ್ರಾಂಶುಪಾಲ ಪ್ರೊ.ಎಸ್.ಜಿ. ಪ್ರಕಾಶ್, ಪ್ರಾಧ್ಯಾಪಕ ಮಿರ್ಲೆ ಮೃತ್ಯುಂಜಯ, ಬಸವಂತಪ್ಪ ಗುದಗತ್ತಿಯರ್, ಸಿಡಿಸಿ ಸದಸ್ಯರಾದ ಜ್ಯೋತಿಜಯಸೇನ, ನಂಜಪ್ಪಶೆಟ್ಟಿ, ಚಂದ್ರೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

