ಚುಂಚನಕಟ್ಟೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ
ಕೆ.ಆರ್. ನಗರ: ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಗಣಪತಿ ದೇವಾಲಯದಲ್ಲಿ ಸಾರಿಗೆ ಸಂಸ್ಥೆ ನೌಕರರ ಸಂಘ ಇತ್ತೀಚೆಗೆ ಆಯೋಜಿಸಿದ್ದ ಆದಿಚುಂಚನಗಿರಿ ಸ್ವಾಮೀಜಿಗಳ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೇರ್ಯ ಗ್ರಾಮದಲ್ಲಿ ನಿಲ್ದಾಣ ನಿರ್ಮಿಸಲು 60 ಲಕ್ಷ ಮಂಜೂರು ಮಾಡಿಸಿ ಸ್ಥಳ ಗುರುತಿಸಲಾಗಿದೆ. ಹೊಸೂರು ಮತ್ತು ಮಿರ್ಲೆ ಗ್ರಾಮಗಳ ನಿಲ್ದಾಣದ ಆವರಣವನ್ನು ಕಾಂಕ್ರಿಟೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಬಸ್ಪಾಸ್ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗೆ ಸಂದಾಯ ಮಾಡುತ್ತಿದ್ದು, ಸಾರಿಗೆ ನಿರ್ವಾಹಕರು ವಿದ್ಯಾರ್ಥಿಗಳನ್ನು ಉಚಿತವಾಗಿ ಕರೆದೊಯ್ಯುವ ರೀತಿ ವರ್ತಿಸಬಾರದು ಎಂದು ಸಲಹೆ ನೀಡಿದ ಶಾಸಕರು, ಪಟ್ಟಣಕ್ಕೆ ಐಟಿಐ ಕಾಲೇಜು ಮಂಜೂರಾಗಿದೆ ಎಂದರು. ಸಾರಿಗೆ ಇಲಾಖೆಯ ಗ್ರಾಮಾಂತರ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಸೇರಿದಂತೆ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

