ಮೈಸೂರು

ತಂತ್ರಜ್ಞಾನ ಅರಿತ ಶಿಕ್ಷಕರ ಅಗತ್ಯವಿದೆ: ಪ್ರೊ. ರಂಗಪ್ಪ

Published On :

ಕ.ಪ್ರ.ವಾರ್ತೆ    ಮೈಸೂರು    ಫೆ. 18
ಬದಲಾದ ಶಿಕ್ಷಣ ವ್ಯವಸ್ಥೆ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಪೂರಕವಾಗಿ ನುರಿತ ಶಿಕ್ಷಕರ ಅಗತ್ಯವಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಹೇಳಿದರು.
ಮೈಸೂರು ವಿವಿ ಯುಜಿಸಿ-ಶೈಕ್ಷಣಿಕ ಸಿಬ್ಬಂದಿ ಮಹಾವಿದ್ಯಾಲಯ ಮಂಗಳವಾರ ಆಯೋಜಿಸಿದ್ದ 103ನೇ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂತ್ರಜ್ಞಾನದಿಂದಾಗಿ ದಿನನಿತ್ಯ ಒಂದಲ್ಲ ಒಂದು ಕ್ಷೇತ್ರದಲ್ಲಿ ಹೊಸ ಬೆಳವಣಿಗೆ ಆಗುತ್ತಿದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯೂ ಬದಲಾಗಿದೆ. ಈ ಕಾಲಘಟ್ಟದಲ್ಲಿ ನುರಿತ ಶಿಕ್ಷಕರ ಅಗತ್ಯವಿದೆ ಎಂದರು.
ಇಂದು ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ. ಶಿಕ್ಷಕರು ಕಲಿಯುವುದು ಸಾಕಷ್ಟಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಕೌಶಲ್ಯ ಪೂರಿತ ಶಿಕ್ಷಕರು ಬೇಕಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ನುರಿತ ಶಿಕ್ಷಕರಾಗಬೇಕಿದ್ದರೆ ತಾಂತ್ರಿಕತೆಗೆ ತಮ್ಮನ್ನು ತಾವು ಒಡ್ಡಿಕೊಳ್ಳಬೇಕು ಎಂದರು.
ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದಗೌಡ ಮುಖ್ಯ ಅತಿಥಿಯಾಗಿದ್ದರು. ಯುಜಿಸಿ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಲಿಂಗರಾಜ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕ ಡಾ.ಎಲ್. ನಂಜುಂಡಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.