ಮೈಸೂರು

ದೇಶದಲ್ಲಿ ತುಷ್ಟೀಕರಣ ರಾಜಕೀಯ: ತೋಂಟದಾರ್ಯ

Published On :

ಮೈಸೂರು: ಸ್ವಾತಂತ್ರ್ಯಾ ನಂತರ ದೇಶದಲ್ಲಿ ತುಷ್ಟೀಕರಣ ರಾಜಕೀಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ಹೇಳಿದರು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಸರ್ದಾರ್ ಪಟೇಲರ ಏಕತಾ ಪ್ರತಿಮೆ ಲೋಹ ಸಂಗ್ರಹಣಾ ಸಹಕಾರ ಸಮಿತಿಯು ಜಿಲ್ಲೆಯಲ್ಲಿ ಸಂಗ್ರಹಿಸಿದ ಲೋಹ, ಪವಿತ್ರ ಮಣ್ಣು ಹಾಗೂ ಸುರಾಜ್ ಯಾಚಿಕೆಯ ಸಹಿ ಸಂಗ್ರಹದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಂಸತ್ತಿನಲ್ಲಿ ಯಾವುದೆ ಮಸೂದೆ ಅಂಗೀಕಾರವಾದರೂ ಜಮ್ಮು ಕಾಶ್ಮೀರ ಬಿಟ್ಟು ಉಳಿದೆಲ್ಲ ಕಡೆಯೂ ಅನ್ವಯಿಸುತ್ತದೆ. ಈ ನೀತಿಗೆ ನೆಹರು ಕಾರಣ. ದೇಶವನ್ನು ನೆಹರು ಛಿದ್ರಗೊಳಿಸಿದರು. ಇಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಒಟ್ಟುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಸರ್ದಾರ್ ಪಟೇಲ್ ಅವರ ಪ್ರತಿಮೆ ಸ್ಥಾಪನೆಗಾಗಿ ಜಿಲ್ಲೆಯ 230 ಗ್ರಾಮಗಳಿಂದ ಸಂಗ್ರಹಿಸಿದ ಲೋಹ, ಸಹಿ ಸಂಗ್ರಹಿಸಲಾಗಿದೆ ಎಂದರು. ಕೈವಲ್ಯಾನಂದ ಸ್ವಾಮೀಜಿ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಸಮಿತಿ ಸಂಚಾಲಕ ರಮೇಶ್, ಮುಖಂಡ ದಿನೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.