ಮೈಸೂರು

ಅಂಚೆ ನೌಕರರ ಮುಷ್ಕರ ಆರಂಭ

Published On :

ಮೈಸೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಮೈಸೂರು ವಿಭಾಗದವರು ನಗರದ ಯಾದವಗಿರಿಯಲ್ಲಿರುವ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರವು ಮಂಗಳವಾರ ಆರಂಭವಾಯಿತು.
ಗ್ರಾಮೀಣ ಅಂಚೆ ನೌಕರರಿಗೆ ಇಲಾಖೇತರರು ಎಂಬ ಹಣೆಪಟ್ಟಿ ತೊಲಗಿಸಿ ಕೇಂದ್ರ ಸರ್ಕಾರಿ ನೌಕರರ ಸ್ಥಾನಮಾನ ನೀಡಬೇಕು. ಕೇಂದ್ರ ಸರ್ಕಾರ ನೇಮಿಸಿರುವ 7ನೇ ವೇತನ ಆಯೋಗದಲ್ಲಿ ಗ್ರಾಮೀಣ ಅಂಚೆ ನೌಕರರನ್ನು ಸೇರಿಸಿ ವೇತನ ಪರಾಮರ್ಶೆ ನಡೆಸಬೇಕು. ಮೃತ ಅಂಚೆ ನೌಕರರ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರಿತ ನೌಕರಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕಡ್ಡಾಯವಾಗಿ ಎಲ್ಲ ಅಂಚೆ ಪೇದೆ, ಎಂಟಿಎಸ್ ಖಾಲಿ ಹುದ್ದೆಗಳನ್ನು ಗ್ರಾಮೀಣ ಅಂಚೆ ನೌಕರರಿಗೆ ನೀಡಬೇಕು. ಶೇ.50 ತುಟ್ಟಿ ಭತ್ಯೆಯನ್ನು ವೇತನದೊಂದಿಗೆ ವಿಲೀನಗೊಳಿಸಬೇಕು. 2006ರಿಂದ ಅನ್ವಯವಾಗುವಂತೆ ಅರೆಕಾಲಿಕ ನೌಕರರನ್ನು ಕಾಯಂಗೊಳಿಸಿ, ತುಟ್ಟಿ ಭತ್ಯೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಗ್ರಾಮೀಣ ಅಂಚೆ ನೌಕರರ ಸಂಘದ ಮೈಸೂರು ವಿಭಾಗದ ಅಧ್ಯಕ್ಷ ಬಿ. ಮಂಜುನಾಥಸ್ವಾಮಿ, ಕಾರ್ಯಾಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಶಂಭುಲಿಂಗಯ್ಯ, ಖಜಾಂಚಿ ಜೆ.ಎಂ. ಬಸವರಾಜು, ಲೆಕ್ಕ ಪರಿಶೋಧಕ ಚೆಲುವರಾಯಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.