ಮೈಸೂರು

ನವೀಕರಿಸಬಹುದಾದ ಇಂಧನ ಅವಲಂಬನೆ ಅಗತ್ಯ: ಕಿರಣ್

Published On :

ಮೈಸೂರು: ಪ್ರಾಕೃತಿಕ ಸಂಪನ್ಮೂಲಗಳು ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ನವೀಕರಿಸಬಹುದಾದ ಇಂಧನವನ್ನು ಹೆಚ್ಚು ಅವಲಂಬಿಸಬೇಕು ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಿ. ಕಿರಣ್ ಹೇಳಿದರು.
ನಗರದ ಎಂಜಿನಿಯರುಗಳ ಸಂಸ್ಥೆಯ ಎಸ್.ಪಿ. ಭಟ್ ಸಭಾಂಗಣದಲ್ಲಿ ಮಂಗಳವಾರ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಆಧುನಿಕ ಜೀವನ ಪದ್ಧತಿಯಲ್ಲಿ ಸಂಪನ್ಮೂಲಗಳ ಬಳಕೆ ಹೆಚ್ಚಾಗಿದೆ. ಅಲ್ಲದೆ ಪ್ರಾಕೃತಿಕ ಸಂಪನ್ಮೂಲದ ಕೊರತೆಯೂ ಹೆಚ್ಚಾಗುತ್ತಿದೆ. ಆದ್ದರಿಂದ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ನವೀಕರಿಸಬಹುದಾದ ಇಂಧನ ಉಪಯೋಗಿಸಬೇಕು ಎಂದರು. ಎಫ್ಕೆಸಿಸಿಐ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಉಪಾಧ್ಯಕ್ಷೆ ಗಾಯತ್ರಿ ಕೇಶವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.