'ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ'
ಸಾಲಿಗ್ರಾಮ: ಆಧುನಿಕ ಜೀವನ ಶೈಲಿ ಹಾಗೂ ಅಸುರಕ್ಷಿತ ಲೈಂಗಿಕ ಜೀವನವೇ ಏಡ್ಸ್ ರೋಗಕ್ಕೆ ಮೂಲಭೂತ ಕಾರಣವಾಗಿದೆ ಎಂದು ಆದಿಚುಂಚನಗಿರಿಯ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಚಿಕ್ಕಕೆಂಪೇಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದ ಸ್ವಯಂ ಸೇವಕರಿಗೆ ಏರ್ಪಡಿಸಿದ್ದ ಏಡ್ಸ್ ಅರಿವು ಜಾಗೃತಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಕುಂದುತ್ತದೊ, ಆಗ ಈ ಮಹಾಮಾರಿ ರೋಗಕ್ಕೆ ಬಲಿಯಾಗುತ್ತಾನೆ. ತಾಯಿಯ ಎದೆ ಹಾಲು ಮಗುವಿಗೆ ಸಂಜೀವಿನಿಯಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಸ್ತ್ರೀಯರು ಆಧುನಿಕತೆಯ ನವಜೀವನದ ಆಸೆಯಿಂದ ತಮ್ಮ ಮಕ್ಕಳಿಗೆ ಎದೆ ಹಾಲನ್ನು ನೀಡದೆ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತಿದ್ದಾರೆಂದು ಅವರು ವಿಷಾದಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಪ್ತ ಸಲಹಾಧಿಕಾರಿ ಶಾಂತಾ ಮಾತನಾಡಿ, ಪ್ರತಿ ವರ್ಷವೂ ಡಿಸೆಂಬರ್ 1ನ್ನು ವಿಶ್ವ ಏಡ್ಸ್ ದಿನ ಎಂದು ಆಚರಿಸಲಾಗುತ್ತಿದೆ. ನ್ಯೂಯಾರ್ಕ್ನ ಕಲಾವಿದರು ರೂಪಿಸಿದ ರೆಡ್ ರಿಬ್ಬನ್ ಅಂತಾರಾಷ್ಟ್ರೀಯ ಅರಿವಿನ ಚಿಹ್ನೆಯಾಗಿ 1992ರಿಂದಲೂ ಈ ಜಾಗೃತಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಏಡ್ಸ್ ತಡೆಗಟ್ಟುವ ಯತ್ನವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಂಶುಪಾಲ ಪ್ರೊ. ಪ್ರಕಾಶ್, ಪ್ರಾಧ್ಯಾಪಕರಾದ ಮೃತ್ಯುಂಜಯ, ಮಂಜುನಾಥ್, ಎನ್ಎಸ್ಎಸ್ ಅಧಿಕಾರಿ ಕುಮಾರ್, ವಿದ್ಯಾರ್ಥಿ ಮುಖಂಡ ವಿಜಯಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

