ಮೈಸೂರು

ಅಂತರ್ ಕಾಲೇಜು ಮಹಿಳಾ ಕ್ರೀಡಾಕೂಟ

Published On :

ಮೈಸೂರು: ಮೈಸೂರು ವಿವಿ ಅಂತರ್ ಕಾಲೇಜು ಅಂತರ್ ವಲಯ ಮಹಿಳಾ ಕ್ರೀಡಾಕೂಟದ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವು ಮಹಾರಾಣಿ ಪದವಿ ಕಾಲೇಜು ಆವರಣದಲ್ಲಿ ನಡೆಯಿತು.  
ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಬಹುಮಾನ ವಿತರಿಸಿದರು.
ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಬಹುಮಾನ ಪಡೆದ ಟೆರಿಷಿಯನ್ ಕಾಲೇಜು ಪ್ರಥಮ, ಮಾನಸಗಂಗೋತ್ರಿಯ ಪಿಜಿ ಕ್ರೀಡಾ ಪರಿಷತ್ ದ್ವಿತೀಯ ಹಾಗೂ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜು ತೃತೀಯ ಬಹುಮಾನ ಪಡೆದು ಸಮಗ್ರ ಪಾರಿತೋಷಕಕ್ಕೆ ಭಾಜನವಾಯಿತು. ಉಳಿದಂತೆ 14 ವಿವಿಧ ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿರುವ ಕಾಲೇಜುಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ನಂತರ ಮಾತನಾಡಿದ ಶಾಸಕ ಮರಿತಿಬ್ಬೇಗೌಡ, ಬದುಕಿನಲ್ಲಿ ಆರೋಗ್ಯ ಹಾಗೂ ಶಿಸ್ತನ್ನು ಹೊಂದಬೇಕಾದರೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿಯೂ ಹೆಚ್ಚಾಗಿ ವಿದ್ಯಾರ್ಥಿನಿಯರು ಆಸಕ್ತಿ ವಹಿಸಬೇಕು. ಈ ದಿಸೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಬಹುಮುಖ್ಯ ಎಂದರು.    
ಮುಖ್ಯ ಅತಿಥಿಯಾಗಿ ಮಾತನಾಡಿದ ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸಿ. ಕೃಷ್ಣ, ಈ ಸಾಲಿನ ಬಜೆಟ್ನಲ್ಲಿ ಕ್ರೀಡಾ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿರುವುದು ಸಂತಸದ ಸಂಗತಿ. ಒಲಂಪಿಕ್ಸ್ ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತರಿಗೆ 1 ಕೋಟಿ, ಬೆಳ್ಳಿ ಪದಕ ಗೆದ್ದವರಿಗೆ 50 ಲಕ್ಷ ಹಾಗೂ ಕಂಚಿನ ಪದಕ ಪಡೆದವರಿಗೆ 25 ಲಕ್ಷ, ಇನ್ನಿತರ ಕ್ರೀಡೆಗಳಲ್ಲಿ ಸಾಧನೆ ತೋರಿದವರಿಗೆ ನಗದು ಪುರಸ್ಕಾರ ಘೋಷಿಸಿರುವ ಮುಖ್ಯಮಂತ್ರಿಯವರ ದೂರದೃಷ್ಟಿ ಆಭಿನಂದನೀಯ ಎಂದರು.   
ಈ ಸಂದರ್ಭದಲ್ಲಿ ನಿವೃತ್ತಿ ಅಂಚಿನಲ್ಲಿರುವ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಿ ಟಿ.ಎಸ್ ಯಶೋಧ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಪುರುಷೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಸಮಿತಿ ಸದಸ್ಯೆ ಕೆ. ಸಂಗೀತ ಇದ್ದರು. ಪ್ರೊ. ಕೆ.ಎಸ್.ರಾಮಪ್ರಸಾದ್ ಸ್ವಾಗತಿಸಿದರು. ವಿವಿ ವ್ಯಾಪ್ತಿಯ 45 ಕಾಲೇಜುಗಳಿಂದ 750 ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.