ಪ್ರಾದೇಶಿಕ ಸಮ್ಮೇಳನ
ಮೈಸೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಫೆ. 21, 22ರಂದು ಆರೋಗ್ಯ ರಕ್ಷಣೆ ಮತ್ತು ಶಿಕ್ಷಣಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ಪ್ರಾದೇಶಿಕ ಸಮ್ಮೇಳನ ಆಯೋಜಿಸಲಾಗಿದೆ. ಫೆ. 21ರ ಬೆಳಗ್ಗೆ 10.30ಕ್ಕೆ ಕೆಎಸ್ಟಿಎ ಅಧ್ಯಕ್ಷ ಯು.ಆರ್. ರಾವ್ ಉದ್ಘಾಟಿಸಲಿದ್ದು, ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್. ಹೆಗ್ಡೆ ಭಾಷಣ ಮಾಡುವರು. ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ. ಸಿದ್ದಪ್ಪ ಅಧ್ಯಕ್ಷತೆ ವಹಿಸಲಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಡಾ.ಎಚ್. ಹೊನ್ನೇಗೌಡ, ಜೆಎಸ್ಎಸ್ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಭಾಗವಹಿಸುವರು. ಫೆ.22ರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.
ಅರಿವು ಮಾಸಾಚರಣೆ
ಮೈಸೂರು: ರೋಟರಿ ಮೈಸೂರು ಉತ್ತರ ಘಟಕದಿಂದ ಫೆ.21ರ ಸಂಜೆ 6.30ಕ್ಕೆ ರೋಟರಿ ಕೇಂದ್ರದಲ್ಲಿ ವಿಶ್ವ ಅರಿವಿನ ಮಾಸಾಚರಣೆ ಪಾಲ್ ಹ್ಯಾರಿಸ್- ಒಂದು ನೆನಪು ಮತ್ತು ಗವರ್ನರ್ಗಳ ಸಮ್ಮಿಲನ ಏರ್ಪಡಿಸಿದ್ದು, ಆರ್. ವಾಸುದೇವಮೂರ್ತಿ, ಡಾ.ಎಚ್.ಎಸ್. ಶಿವಣ್ಣ, ಜಿ.ಕೆ. ಬಾಲಕೃಷ್ಣನ್ ಭಾಗವಹಿಸುವರು.
ನ್ಯಾಯಾಂಗ ನಿಂದನೆ; ಕ್ರಮಕ್ಕೆ ಆಗ್ರಹ
ಮೈಸೂರು: ಗ್ರಾಹಕ ರಕ್ಷಣಾ ಕಾಯ್ದೆ ಜಾರಿಗೊಳಿಸಲು ಮುಂದಾಗದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಗ್ರಾಹಕ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ಡಾ.ಎಸ್.ಪಿ. ತಿರುಮಲರಾವ್ ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಅವರನ್ನು ಆಗ್ರಹಿಸಿದ್ದಾರೆ.
ಗ್ರಾಹಕ ರಕ್ಷಣಾ ಕಾಯ್ದೆಯನ್ನು ಬಲಪಡಿಸುವುದಕ್ಕಾಗಿ ಗ್ರಾಹಕರ ರಾಜ್ಯ ರಕ್ಷಣಾ ಪರಿಷತ್ ರಚಿಸುವಂತೆ ಈ ಹಿಂದೆ ಕೋರಲಾಗಿತ್ತು. ಆದರೆ, ಸರ್ಕಾರ ಇದುವರೆಗೂ ಯಾವುದೇ ನಿರ್ದೇಶನ ನೀಡಿಲ್ಲ. ಬಸವನಗೌಡ ಪಾಟೀಲ್ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ರಾಜ್ಯ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ವೇದಿಕೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಕೋರಿದ್ದರು. ಈ ಸಂಬಂಧ ಹೈಕೋರ್ಟ್ 2013, ಜೂ. 3ರಂದು ತೀರ್ಪು ನೀಡಿ ನಿಗದಿತ ಕಾಲಾವಧಿಯಲ್ಲಿ ಭರ್ತಿ ಮಾಡುವಂತೆ ಆದೇಶಿಸಿತ್ತು. ಇಷ್ಟು ದಿನ ಕಳೆದರೂ ಸರ್ಕಾರ ಖಾಲಿ ಹುದ್ದೆ ಭರ್ತಿ ಮಾಡದೆ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

