ಮೈಸೂರು

ಸ್ಥಳೀಯ ಪ್ರವಾಸಿ ವಾಹನ ಪ್ರೋತ್ಸಾಹಿಸಲು ಮನವಿ

Published On :

ಮೈಸೂರು: ಮೈಸೂರು ಸುತ್ತಮುತ್ತ ಇರುವ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರು ಬೇರೆ ಜಿಲ್ಲೆಯ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿರುವುದರಿಂದ ಇಲ್ಲಿನ ವಾಹನ ಮಾಲೀಕರಿಗೆ ತೊಂದರೆಯಾಗುತ್ತಿದೆ ಎಂದು ಮೈಸೂರು ಜಿಲ್ಲಾ ಪ್ರವಾಸಿ ಬಸ್ಸು ಮಾಲೀಕರು ಮತ್ತು ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಬಸ್ಸಿನ ಬಿಡಿ ಭಾಗಗಳು, ಇಂಧನ ಹಾಗೂ ವಾಹನ ವಿಮೆ, ವಾಹನ ತೆರಿಗೆ ಇತ್ಯಾದಿ ಕಾರಣಗಳಿಂದ ವಾಹನ ನಿರ್ವಹಣೆ ದುಬಾರಿ ಆಗಿರುವ ಕಾರಣ ನಮ್ಮ ಸಂಘದ ವತಿಯಿಂದ ಪ್ರವಾಸಿ ಬಸ್ಸುಗಳ ವೆಚ್ಚ ಭರಿಸಲು ಕಷ್ಟವಾಗುತ್ತಿದೆ. ಜತೆಗೆ ಹೊರ ಜಿಲ್ಲೆಯಿಂದ ನಮ್ಮ ಜಿಲ್ಲೆಗೆ ಬಂದ ಪ್ರವಾಸಿ ಬಸ್ಸುಗಳಿಂದ ಮೈಸೂರಿನ ಪ್ರವಾಸಿ ಬಸ್ಸುಗಳಿಗೆ ತೊಂದರೆ ಆಗಿದೆ. ಈ ಬಗ್ಗೆ ಆರ್ಟಿಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕ್ರಮ ಕೈಗೊಂಡು ಮಾಲೀಕರಿಗೆ ಅನುಕೂಲ ಮಾಡಿಕೊಡಬೇಕೆಂದು ಅವರು ಕೋರಿದ್ದಾರೆ.


ನಾಯಿ ದಾಳಿ; ಜಿಂಕೆಗೆ ಗಾಯ
ಮೈಸೂರು: ನಾಡಿಗೆ ಬಂದ ಜಿಂಕೆಯ ಮೇಲೆ ಬೀದಿ ನಾಯಿಗಳ ಹಿಂಡೊಂದು ಬುಧವಾರ ಬೆಳಗ್ಗೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬೋಗಾದಿ ಗ್ರಾಮದಲ್ಲಿ ನಡೆದಿದೆ. ನಾಯಿಗಳು ದಾಳಿ ನಡೆಸುತ್ತಿರುವುದನ್ನು ಕಂಡ ಕೆಲವರು ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬೋಗಾದಿ ಮಾರ್ಗವಾಗಿ ವಿಜಯನಗರ 4ನೇ ಹಂತದ 80 ಅಡಿ ರಸ್ತೆಯಲ್ಲಿ ಜಿಂಕೆ ಕಾಣಿಸಿಕೊಂಡಿದೆ. ಈ ವೇಳೆ ಬೀದಿ ನಾಯಿಗಳ ಹಿಂಡು ಜಿಂಕೆ ಮೇಲೆ ದಾಳಿ ನಡೆಸಿವೆ. ಗಾಯಗೊಂಡ ಜಿಂಕೆಗೆ ಪೀಪಲ್ಸ್ ಫಾರ್ ಅನಿಮಲ್ಸ್ ಸಂಸ್ಥೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಶ್ರೀ ಚಾಮರಾಜೇಂದ್ರ ಮೃಗಾಲಯದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.