ಅಂಚೆ ಮತದಾನಕ್ಕೆ ಮಾಹಿತಿಗಾಗಿ ಸೂಚನೆ
ಮೈಸೂರು: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸಲ್ಪಡುವ ಅಧಿಕಾರಿ ಹಾಗೂ ಸಿಬ್ಬಂದಿ ಮತದಾನದ ಹಕ್ಕನ್ನು ಪಡೆದು ಅಂಚೆ ಮತಪತ್ರ, ಇಡಿಎಸ್ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಶಿಖಾ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸರ್ಕಾರಿ, ಅರೆ ಸರ್ಕಾರಿ, ಕೇಂದ್ರ ಸರ್ಕಾರಿ, ಬ್ಯಾಂಕ್, ಕೆಎಸ್ಸಾರ್ಟಿಸಿ ಇತರೆ ಸರ್ಕಾರಿ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿ ಹೊಂದಿರಬೇಕು. ಅವರು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವೆಬ್ಸೈಟ್ ಢಿಢಿಢಿ.್ಛಜ್ಟ್ಞಛ್ಠಟಿಛಡಿಛ್ಞಛ.್ಞಛ್ಠ.ಟ್ಝ್ಛಿ.್ಝಟಿ ನಲ್ಲಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇರುವವರು ಈ ತಿಂಗಳೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆ, ವಿಧಾನಸಭಾ ಕ್ಷೇತ್ರದ ಸಂಖ್ಯೆ ಮತ್ತು ಹೆಸರು, ಮತದಾರರ ಪಟ್ಟಿಯ ಭಾಗದ ಸಂಖ್ಯೆ, ಮತದಾರರ ಪಟ್ಟಿಯ ಕ್ರಮ ಸಂಖ್ಯೆ ವಿವರವನ್ನು ಇಲಾಖಾ ಮುಖ್ಯಸ್ಥರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ 216- ಕೃಷ್ಣರಾಜ, 217- ಚಾಮರಾಜ, 218- ನರಸಿಂಹರಾಜ ವಿಧಾನಸಭಾ ಕ್ಷೇತ್ರದವರು ಮೈಸೂರು ಮಹಾನಗರ ಪಾಲಿಕೆ ಕಚೇರಿ ದೂ. 0821- 2418860, 215- ಚಾಮುಂಡೇಶ್ವರಿ ಕ್ಷೇತ್ರದ ಮೈಸೂರು ತಾಲೂಕು ಕಚೇರಿ ದೂ. 0821-2414811, 214- ನಂಜನಗೂಡು ಕ್ಷೇತ್ರದವರು ನಂಜನಗೂಡು ತಾಲೂಕು ಕಚೇರಿ ದೂ. 08221- 226002, 220- ಟಿ. ನರಸೀಪುರ ಕ್ಷೇತ್ರದವರು ಟಿ. ನರಸೀಪುರ ತಾಲೂಕು ಕಚೇರಿ ದೂ. 08227- 261233, 210- ಪಿರಿಯಾಪಟ್ಟಣ ಕ್ಷೇತ್ರದವರು ಅಲ್ಲಿನ ತಾಲೂಕು ಕಚೇರಿ ದೂ. 08223- 274175, 211- ಕೆ.ಆರ್. ನಗರ ಕ್ಷೇತ್ರದವರು ಅಲ್ಲಿನ ತಾಲೂಕು ಕಚೇರಿ ದೂ. 08223-262371, 212- ಹುಣಸೂರು ಕ್ಷೇತ್ರದವರು ಅಲ್ಲಿನ ತಾಲೂಕು ಕಚೇರಿ ದೂ. 08222- 252040, 213- ಎಚ್.ಡಿ. ಕೋಟೆ ಕ್ಷೇತ್ರದವರು ಅಲ್ಲಿನ ತಾಲೂಕು ಕಚೇರಿ ದೂ. 08228- 255325 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

