ಕಾವಲುಗಾರ ನಾಪತ್ತೆ
ಮೈಸೂರು: ಯಾದವಗಿರಿ ವಿವಿ ವಾಟರ್ವರ್ಕ್ಸ್ ವಸತಿಗೃಹ ನಿವಾಸಿ ಹಾಗೂ ವಾಣಿವಿಲಾಸ ನೀರು ಸರಬರಾಜು ಕಾರ್ಯಾಗಾರದಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದ ಎಂ. ಮಾದು ಅ. ಮಹದೇವ (55) ನಾಪತ್ತೆಯಾಗಿದ್ದಾರೆ. ಚಹರೆ- 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418114, 314 ಸಂಪರ್ಕಿಸಲು ವಿವಿ ಪುರಂ ಠಾಣೆ ಪೊಲೀಸರು ಕೋರಿದ್ದಾರೆ.
ವಾಹನ ನಿಲ್ದಾಣ ಉದ್ಘಾಟನೆ
ಮೈಸೂರು: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ ವಾಹನ ನಿಲುಗಡೆ ಸ್ಥಳವನ್ನು ಸಂಸ್ಥೆಯ ನಿರ್ದೇಶಕಿ ಡಾ. ಎಸ್.ಆರ್. ಸಾವಿತ್ರಿ ಉದ್ಘಾಟಿಸಿದರು.
ರಾಜ್ಯದವರು ಮಾತ್ರವಲ್ಲದೆ ಹೊರ ರಾಜ್ಯಗಳ ಅನೇಕರು ಇಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ಸಮಸ್ಯೆ ಎದುರಾಗಿತ್ತು. ಇದನ್ನು ಮನಗಂಡು ಸಂಸ್ಥೆಯು ವಾಹನ ನಿಲ್ದಾಣ ವ್ಯವಸ್ಥೆ ಕಲ್ಪಿಸಿದೆ. ಇಂಟರ್ ಲಾಕಿಂಗ್ ಟೈಲ್ಸ್ ಬಳಸಿ ನಿರ್ಮಿಸಿರುವ ಇಲ್ಲಿ ಸುಮಾರು 50 ನಾಲ್ಕು ಚಕ್ರದ ವಾಹನ ನಿಲ್ಲಿಸಬಹುದು. ಈಗಾಗಲೆ ಸಂಸ್ಥೆಯ ರೋಗಿಗಳು ಹಾಗೂ ಅವರ ಪೋಷಕರ ಅನುಕೂಲಕ್ಕಾಗಿ ಹಲವು ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸಂಸ್ಥೆಯ ವಾತಾವರಣವನ್ನು ಪರಿಸರಕ್ಕೆ ಪೂರಕವಾಗಿ ಇರಿಸಲಾಗಿದೆ.
ವಾಹನ ನಿಲ್ದಾಣ ಉದ್ಘಾಟನೆ ವೇಳೆ ಸಂಸ್ಥೆಯ ಆಡಳಿತಾಧಿಕಾರಿ ಕೆ. ಪುರುಷೋತ್ತಮ್, ಲೆಕ್ಕಾಧಿಕಾರಿ ಪ್ರಸಾದ್, ಎಇಇ ತ್ರಯಂಭಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

